ಯೋಗದಿಂದ ನಮ್ಮ ಆರೋಗ್ಯ ಕಾಪಾಡುವ ಜೊತೆಗೆ ನಮ್ಮ ದೇಶವನ್ನು ಕೂಡ ಆರೋಗ್ಯ ವಾಗಿರಸ ಬಹುದು ಹಾಗೇಯೇ ನಮ್ಮ ದೇಶದ ಸಂಸ್ಕೃತಿಯನ್ನು ನಾವು ಕಾಣಬಹುದು ಎಂದು ಶಿವಮೊಗ್ಗ ನಗರದ ಸನ್ಮಾನ್ಯ ಶಾಸಕರಾದ ಶ್ರೀ ಎಸ್ ಎನ್ ಚನ್ನಬಸಪ್ಪ ನವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಭಾರತ ಸರ್ಕಾರದ ಕೇಂದ್ರ ಸಂವಹನ ಇಲಾಖೆ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಶಿವಮೊಗ್ಗ ಇವರು ಕುವೆಂಪು ವಿಶ್ವವಿದ್ಯಾಲಯ ,ಎನ್.ಎಸ್.ಎಸ್. ಹಾಗೂ ಸಹ್ಯಾದ್ರಿ ವಿಜ್ಞಾನ ಕಾಲೇಜು ಇವರ ಸಹಯೋಗದಲ್ಲಿ ಇಂದು ಕಾಲೇಜಿನ

ಆವರಣದಲ್ಲಿ ಆಯೋಜಿಸಿದ್ದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಮತ್ತು ಕೇಂದ್ರ ಸರ್ಕಾರದ 9 ವರ್ಷಗಳ ಸೇವೆಯ ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

.


ಮೊದಿಜೀ ನುಡಿದಂತೆ ನಡೆಯುತ್ತಾ ನಮ್ಮ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಾ ನಮ್ಮ ದೇಶವನ್ನ ಪ್ರಪಂಚದ ಎಲ್ಲಾ ದೇಶಗಳು ತಿರುಗಿ ನಮ್ಮ ದೇಶದತ್ತ ನೋಡುವಂತೆ ಮಾಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಫ್ರೊಫೆಸರ್ ರಾಜೇಶ್ವರಿ ಕುವೆಂಪು ವಿಶ್ವವಿದ್ಯಾನಿಲಯದ ಪರಿಸರ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ.ನಾಗರಾಜು ಪರಸರ ಹಾಗೂ ಪ್ರೊಫೆಸರ್ ವೀಣಾ, ಪ್ರಾಚಾರ್ಯರು ಸಹ್ಯಾದ್ರಿ ವಾಣಿಜ್ಯ ಕಾಲೇಜು,

ಕಾಲೇಜಿನ ಸುಮಾರು 400 ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಭಾಗವಹಿಸಿದ್ದರು ಮತ್ತು ಸಂಗೀತ ಮತ್ತು ನಾಟಕ ವಿಭಾಗದ ಕಲಾವಿದರು ನಾಟಕ ಪ್ರದರ್ಶನದ ಮೂಲಕ ಯೋಗ ಹಾಗೂ ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಪರಿಚಯಿಸಿದರು.


ಕಾರ್ಯಕ್ರಮದಲ್ಲಿ ಕೇಂದ್ರ ಸಂವಹನ ಇಲಾಖೆಯ ಕ್ಷೇತ್ರ ಪ್ರಚಾರ ಸಹಾಯಕ ಸಿ.ವಿ.ಲಕ್ಷ್ಮೀಕಾಂತ ಪ್ರಾಸ್ತಾವಿಕವಾಗಿ ಮಾತನಾಡಿದರು.ಗಣೇಶ್ ಕೆಂಚನಾಳ್ ಕಾರ್ಯಕ್ರಮದ ನಿರೂಪಣೆ ಮಾಡಿದರು.

By admin

ನಿಮ್ಮದೊಂದು ಉತ್ತರ

error: Content is protected !!