ಶಿವಮೊಗ್ಗ, ಜೂನ್ 30,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ನ್ಯಾಯವಾದಿಗಳ ಸಂಘ,

ಜಿಲ್ಲಾ ಅಬಕಾರಿ ಇಲಾಖೆ, ಸುಬ್ಬಯ್ಯ ಮೆಡಿಕಲ್ ಕಾಲೇಜು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜುಲೈ 03 ರಂದು ಬೆಳಗ್ಗೆ 9.30 ಕ್ಕೆ ಪುರಲೆಯ ಸುಬ್ಬಯ್ಯ ಮೆಡಿಕಲ್ ಕಾಲೇಜು ಆವರಣದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕ ವಿರೋಧಿ ದಿನಾಚರಣೆಯನ್ನು ಏರ್ಪಡಿಸಲಾಗಿದೆ.


ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಿ.ಎನ್.ಚಂದನ್‍ರವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್. ನೆರವೇರಿಸಲಿರುವರು. ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ, ಜಿಲ್ಲಾ ಅಬಕಾರಿ ಅಧಿಕಾರಿ ಕ್ಯಾ. ಅಜೀತ್ ಕುಮಾರ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿರುವರು.


ಪಾಸಿಟೀವ್ ಮೈಂಡ್ ಆಸ್ಪತ್ರೆಯ ಮನೋವೈದ್ಯರಾದ ಡಾ. ಅರವಿಂದ್ ಎಸ್.ಟಿ. ಹಾಗೂ ಜಿಲಾ ಅಬಕಾರಿ ಅಧಿಕಾರಿ ಕ್ಯಾ. ಅಜೀತ್ ಕುಮಾರ್‍ರವರಿಗೆ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ.

By admin

ನಿಮ್ಮದೊಂದು ಉತ್ತರ

error: Content is protected !!