ಶಿವಮೊಗ್ಗ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರನ್ನು ಬಂಧಿಸಿ, ಆರೋಪಿಗಳಿಂದ 2.21ಲಕ್ಷ ರೂ. ಹಾಗೂ 3ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಶಿವಮೊಗ್ಗ ನಗರದ ಜಯನಗರ ಠಾಣಾ ವ್ಯಾಪ್ತಿಯ ತಿಲಕ್ ನಗರ ಮುಖ್ಯ ರಸ್ತೆಯ ವಿಶ್ವೇಶ್ವರಯ್ಯ ಕಾಂಪ್ಲೆಕ್ಸ್‌ನಲ್ಲಿರುವ ಮೊಬೈಲ್ ಆಂಗಡಿಯಲ್ಲಿ ಆರೋಪಿಗಳು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡವು ಕಾರ್ಯಾಚರಣೆ ನಡೆಸಿ ಪ್ರಕರಣವನ್ನು ದಾಖಲಿಸಿ, ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳಾದ ಶಾಂತಿನಗರದ ಮೊಬೈಲ್ ಅಂಗಡಿ ಮಾಲೀಕ ಅಜೇಯ (35), ರಾಗಿಗುಡ್ಡದ ಕಿರಣ (32), ಗೋಪಾಳದ ಸಂದೀಪ್ (28) ಇವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು ಅವರು ತಿಳಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!