ಶಿವಮೊಗ್ಗ: ರಕ್ತದಾನ ಮಾಡುವ ಬಗ್ಗೆ ಯಾವುದೇ ಭಯ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.
ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವತಿಯಿಂದ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.


ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ರಕ್ತದಾನವು ಅತ್ಯಂತ ಮಹತ್ತರ ಪಾತ್ರ ವಹಿಸುತ್ತದೆ. ಸದೃಢ ಆರೋಗ್ಯಕ್ಕಾಗಿ ಅರ್ಹರಿರುವ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು. ಒಮ್ಮೆ ರಕ್ತದಾನ ಮಾಡುವುದರಿಂದ ಮೂರ್ನಾಲ್ಕು ಜೀವ ಉಳಿಸಲು ಸಾಧ್ಯವಿದೆ ಎಂದರು.

ರಕ್ತದಾನದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಮ್ಮೆ ತಪ್ಪು ಸಂದೇಶಗಳನ್ನು ಹರಡಿಸುತ್ತಾರೆ. ಇದು ಅತ್ಯಂತ ತಪ್ಪುಕೆಲಸ. ಇಂತಹ ಕೆಲಸ ಮಾಡುವುದು ಕೂಡ ತಪ್ಪು. ಪ್ರತಿಯೊಬ್ಬರೂ ರಕ್ತದಾನ ಕುರಿತು ಗೊಂದಲ ಇದ್ದಲ್ಲಿ ವೈದ್ಯರ ಬಳಿ ಸಮಾಲೋಚಿಸಿ ಪರಿಹರಿಸಿಕೊಳ್ಳಬೇಕು ಎಂದರು.


ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಡಾ. ಕೆ.ಎ.ವಿ?ಮೂರ್ತಿ, ಕಾರ್ಯದರ್ಶಿ ಎಸ್.ರಾಜಶೇಖರ್, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್ ಕುಮಾರ್ ಮಾತನಾಡಿದರು.


ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಅಧ್ಯಕ್ಷತೆ ವಹಿಸಿದ್ದರು. ಬೆಳಗ್ಗೆ ೧೦ರಿಂದ ಮಧ್ಯಾಹ್ನ ೩.೩೦ರವರೆಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಐವತ್ತಕ್ಕೂ ಅಧಿಕ ವಿದ್ಯಾರ್ಥಿಗಳು ರಕ್ತದಾನ ಮಾಡಿದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಎಸ್.ಪಿ.ದಿನೇಶ್, ಡಾ. ಎ.ಸತೀಶ್ ಕುಮಾರ್ ಶೆಟ್ಟಿ ಡಾ. ವೀಣಾ.ಎಸ್., ಮಂಜುನಾಥ್ ಅಪ್ಪಾಜಿ, ಡಾ. ಎಂ.ವೆಂಕಟೇಶ್, ಪ್ರೊ. ಎಚ್.ಎಸ್.ಸುಧಾಕರ್, ಪ್ರೊ. ಎನ್.ಕುಮಾರಸ್ವಾಮಿ, ಶ್ರೀನಿವಾಸ್ ಲಮಾಣಿ, ಕೇತನಾ ಆರ್ತಿ, ಧರಣೇಂದ್ರ ದಿನಕರ್, ಮತ್ತಿತರರು ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!