ಶಿವಮೊಗ್ಗ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವಮಾನಿಸಿರುವ ಶಾಸಕ ಆರಕ ಜ್ಞಾನೇಂದ್ರ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು

ಎಂದು ಆಗ್ರಹಿಸಿ ಜೈ ಭೀಮ್ ಕನ್ನಡ ಜಾಗೃತಿ ವೇದಿಕೆ, ಎಸ್‌ಸಿ/ಎಸ್‌ಟಿ ಅಸಂಘಟಿತ ಕಾರ್ಮಿಕರ ಅಭಿವೃದ್ಧಿ ಸಂಘ ಇಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.


ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ.ಅವರ ಬಣ್ಣ ಮತ್ತು ವೈಯಕ್ತಿಕ ವಿಚಾರಗಳನ್ನಿಟ್ಟುಕೊಂಡು ಮಾಜಿ ಗೃಹ ಮಂತ್ರಿಯಾಗಿದ್ದ ಆರಗ ಜ್ಞಾನೇಂದ್ರ ಅವರು ಅವಮಾನ

ಮಾಡಿರುವುದು ದಲಿತ ಸಮುದಾಯವನ್ನೇ ಅವಮಾನ ಮಾಡಿದಂತಾಗಿದೆ. ಆದ್ದರಿಂದ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ದಲಿತ ನಿಂದನೆ ಕೇಸು ದಾಖಲಿಸಬೇಕು

ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ಮಂಜುನಾಥ್ ಎಸ್, ಜಿಲ್ಲಾಧ್ಯಕ್ಷ ಶಶಿಕುಮಾರ್, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಶಿವಕುಮಾರ್ ಸೇರಿದಂತೆ ಹಲವರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!