ಶಿವಮೊಗ್ಗ: ಅಂತರರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಇಂದು ಹೆಚ್‌ಐವಿ/ ಏಡ್ಸ್ ಕುರಿತು ಅರಿವು ಮೂಡಿಸಲು ಜಿಲ್ಲಾ ಮಟ್ಟದಲ್ಲಿ ಮ್ಯಾರಥಾನ್ ಸ್ಪರ್ಧೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಇಂದು ಚಾಲನೆ ನೀಡಲಾಯಿತು.


ಮ್ಯಾರಥಾನ್ ಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಎಸ್.ಎನ್. ಚನ್ನಬಸಪ್ಪ, ರಾಜ್ಯ ಸರ್ಕಾರದ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು, ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಓಟದಿಂದ ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದೆ. ಆರೋಗ್ಯವಂತ ಸಮಾಜ ನಿರ್ಮಾಣ ಎಲ್ಲರ ಕರ್ತವ್ಯವಾಗಿದ್ದು, ಅರಿವು ಮೂಡಿಸುವ ಈ ಕಾರ್ಯಕ್ರಮದಲ್ಲಿ ಎಲ್ಲರೂ ಸೇರಿ ಆರೋಗ್ಯ ಜಾಗೃತಿ ಮೂಡಿಸೋಣ ಎಂದರು.


ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಮಾತನಾಡಿ, ೨೦೩೦ ರೊಳಗೆ ದೇಶದಲ್ಲಿ ಏಡ್ಸ್ ಕಾಯಿಲೆಯನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು ಎಂಬುದು ಸರ್ಕಾರದ ಇಚ್ಛೆಯಾಗಿದೆ. ವಿದ್ಯಾರ್ಥಿಗಳಲ್ಲಿ ಹೆಚ್‌ಐವಿ/ ಏಡ್ಸ್ ಮತ್ತು ರಕ್ತದಾನದ ಮಹತ್ವ ತಿಳಿಸುವ ಉದ್ದೇಶದಿಂದ ಶಿವಮೊಗ್ಗ ತಾಲ್ಲೂಕಿನಲ್ಲಿ ರೆಡ್ ರಿಬ್ಬನ್ ಕ್ಲಬ್ ಹೊಂದಿರುವ ಕಾಲೇಜುಗಳ ಎನ್‌ಎಸ್‌ಎಸ್ ಅಧಿಕಾರಿಗಳ ಸಹಯೋಗದೊಂದಿಗೆ ಈ ಮ್ಯಾರಾಥಾನ್ ಸ್ಪರ್ಧೆ ಏರ್ಪಡಿಸಲಾಗಿದೆ. ಏಡ್ಸ್ ತಡೆಗಟ್ಟಲು ಆರೋಗ್ಯ ಇಲಾಖೆ ಅವಿರತವಾಗಿ ಶ್ರಮಿಸುತ್ತಿದ್ದು, ಎಲ್ಲರೂ ಸಹಕಾರ ನೀಡಬೇಕು ಎಂದರು.
ಹೆಚ್‌ಐವಿ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಬಗ್ಗೆ ಮಾಹಿತಿ, ಕಳಂಕ ಮತ್ತು ತಾರತಮ್ಯ ತಡೆಗಟ್ಟುವುದು ನ್ಯಾಕೋ ಏಡ್ಸ್ ಆಪ್, ಉಚಿತ ರಾಷ್ಟ್ರೀಯ ಸಹಾಯವಾಣಿ ೧೦೯೭, ಎಸ್‌ಐಟಿ ಇತ್ಯಾದಿ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.


ಈ ಮ್ಯಾರಥಾನ್ ಸ್ಪರ್ಧೆಯಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಸಿಇಒ ಸ್ನೇಹಲ್ ಲೋಖಂಡೆ, ಡಿಹೆಚ್‌ಒ ಡಾ. ರಾಜೇಶ್ ಸುರಗಿಹಳ್ಳಿ, ಟಿಹೆಚ್‌ಚ್‌ಒ ಡಾ. ಚಂದ್ರಶೇಖರ್, ಡಾ. ದಿನೇಶ್, ಕ್ರೀಡಾಧಿಕಾರಿ ಮಂಜುನಾಥ್, ಜಿ. ವಿಜಯಕುಮಾರ್ ಮೊದಲಾದವರಿದ್ದರು

By admin

ನಿಮ್ಮದೊಂದು ಉತ್ತರ

error: Content is protected !!