ಶಿವಮೊಗ್ಗ : ಹಿಂದಿನ ಚುನಾವಣೆಯಂತೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿಯೂ ರಾಜ್ಯದಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಬಗ್ಗೆ ಒಂದಾದ ಮೇಲೆ ಒಂದರಂತೆ ಮಂತ್ರಿಗಳ ಮೇಲೆ ಭ್ರಷ್ಟಾಚಾರದ ಆರೋಪ ಬರುತ್ತಿವೆ. ಯಾವ ಮಂತ್ರಿಗಳ ಮೇಲೆ ಭ್ರಷ್ಟಾಚಾರದ ಆರೋಪವಿದೆ ಅವರ ವಿರುದ್ಧ ತನಿಖೆ ಮಾಡಿ. ತಪ್ಪು ಮಾಡಿರುವುದು ತಿಳಿದು ಬಂದರೆ ಸಂಪುಟದಿಂದ ಕೈಬಿಡಬೇಕು ಎಂದು ಅಗ್ರಹಿಸಿದರು.

ರಾಜ್ಯದ ಮಂತ್ರಿಗಳ ಮೇಲೆ ನಿರಂತರವಾಗಿ ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಿವೆ.

ಕೃಷಿ ಸಚಿವ ಚಲುವರಾಯಸ್ವಾಮಿ ಮೇಲೆ ಅಧಿಕಾರಿಗಳಿಂದಲೇ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ.‌ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಎಂದರು.

ರಾಜ್ಯ ಸರ್ಕಾರ ಇನ್ನು 6 ತಿಂಗಳಲ್ಲಿ ಬೀಳಲಿದೆ ಎಂಬ ಬಸವರಾಜ ಯತ್ನಾಳ ಹೇಳಿಕೆ ವಿಚಾರ‌ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರಕ್ಕೆ ಅಸ್ಥಿರತೆ ಕಾಡಲಾರಂಭಿಸಿದೆ.

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆಕಾಂಕ್ಷಿಗಳ ಪಟ್ಟಿ ಶೀಘ್ರವೇ ತಯಾರಿಸಲಾಗುವುದು ಎಂದರು.

By admin

ನಿಮ್ಮದೊಂದು ಉತ್ತರ

error: Content is protected !!