ಶಿಕ್ಷಣದ ಜತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡುವ ಮನೋಭಾವವನ್ನು ವಿದ್ಯಾರ್ಥಿ ಗಳು ಬೆಳೆಸಿಕೊಳ್ಳಬೇಕು’ ಎಂದು ಶಾಸಕ ಬಿ.ವೈ.ವಿಜಯೇಂದ್ರ ಸಲಹೆ ನೀಡಿದರು.
ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಈಚೆಗೆ ನಡೆದ ಪಠ್ಯೇತರ ಚಟುವಟಿಕೆ ಘಟಕಗಳ ವಾರ್ಷಿಕೋತ್ಸವ ಹಾಗೂ ಪಾರಂಪರಿಕ ದಿನಾಚರಣೆ ಕಾರ್ಯ ಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬದುಕಿನಲ್ಲಿ ವಿದ್ಯಾರ್ಥಿ ಜೀವನ ಮಹತ್ವದ ಘಟ್ಟವಾಗಿದೆ. ವಿದ್ಯಾರ್ಥಿ ಜೀವನವನ್ನು ಸದ್ಬಳಕೆ
ಮಾಡಿಕೊಳ್ಳಬೇಕು. ಓದಿಗೆ ಮಾತ್ರ ಸಿಮೀತವಾಗದೇ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ದೇಶದ ಸಂಸ್ಕೃತಿ ಹಾಗೂ ಪರಂಪರೆಗೆ ಜಗತ್ತಿನಲ್ಲಿ ವಿಶಿಷ್ಟ ಸ್ಥಾನಮಾನವಿದೆ. ಈ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಜವಾ ಬ್ದಾರಿ ಯುವಪೀಳಿಗೆ ಮೇಲಿದೆ’ ಎಂದು ಸಲಹೆ ನೀಡಿದರು.
ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಜಿ.ಎಸ್.ಶಿವಕುಮಾರ್ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಶೇಖರ್ ಅಧ್ಯಕ್ಷತೆ ವಹಿಸಿದ್ದರು.
ವಿದ್ಯಾರ್ಥಿ ಕ್ಷೇಮಾಪಾಲನಾ ಅಧಿಕಾರಿ ಆರ್.ಕೆ.ವಿನಯ್, ದೈಹಿಕ ಶಿಕ್ಷಣ ನಿರ್ದೇಶಕ ಎ.ಬಿ.ಅನಿಲ್ ಕುಮಾರ್, ವಿವಿಧ ಘಟಕಗಳ ಸಂಚಾಲಕರು ಉಪಸ್ಥಿತರಿದ್ದರು.