ಶಿವಮೊಗ್ಗ, ಸೆಪ್ಟೆಂಬರ್ ೦೫, ಸೆಪ್ಟಂಬರ್ ೦೬ ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ.
ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.