ಧಾರವಾಡ, ನ.22- ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾದರೆ ಕಾಲೇಜುಗಳನ್ನು ಬಂದ್ ಮಾಡುವುದು ಅನಿವಾರ್ಯ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿಲ್ಲಿ ಮತ್ತು ಅಹಮದಾಬಾದ್‍ನಲ್ಲಿ ಕೊರೋನಾ ಎರಡನೇ ಅಲೆ ಪ್ರಾರಂಭವಾಗಿದೆ.
ಕರ್ನಾಟಕದಲ್ಲಿ ಕೊರೋನಾ ಪ್ರಕರಣಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಕಾಲೇಜುಗಳನ್ನು ಪ್ರಾರಂಭಿಸಲಾಗಿದೆ. ಮತ್ತೆ ಸೊಂಕು ಪ್ರಕರಣಗಳು ಹೆಚ್ಚಾದರೆ ಕಾಲೇಜುಗಳನ್ನು ಬಂದ್ ಮಾಡಿಸಲಾಗುವುದು ಎಂದು ಹೇಳಿದರು.
ಕರ್ನಾಟಕದಲ್ಲಿ ಕೊರೋನಾ ಹೋಗಿದೆ ಎಂಬ ಭಾವನೆ ಜನರಲ್ಲಿದೆ. ಲಸಿಕೆ ಬರುವವರೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.
ಕಾಲೇಜು ಆರಂಭವಾದಾಗಿ ನಿಂದ 120ರಿಂದ 130 ವಿದ್ಯಾರ್ಥಿಗಳಿಗೆ ಕೋವಿಡ್ 19 ದೃಢಪಟ್ಟಿದೆ. ಯುವ ಜನತೆಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರುತ್ತದೆ ಎಂಬ ಹಿನ್ನೆಲೆಯಲ್ಲಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ರೂಪಿಸುವ ಜವಾಬ್ದಾರಿ ಸರ್ಕಾರದ ಮೇಲಿರುವುದರಿಂದ ಕಾಲೇಜುಗಳನ್ನು ಆರಂಭಿಸಿದ್ದೇವೆ. ಸೋಂಕು ಹೆಚ್ಚಳವಾದರೆ ಕಾಲೇಜುಗಳನ್ನು ಬಂದ್ ಮಾಡುತ್ತೇವೆ ಎಂದು ಹೇಳಿದರು.

By admin

ನಿಮ್ಮದೊಂದು ಉತ್ತರ

error: Content is protected !!