ಶಿವಮೊಗ್ಗ, ಸೆಪ್ಟೆಂಬರ್ ೧೩,
ಶಿಕಾರಿಪುರ ತೋಟಗಾರಿಕೆ ಇಲಾಖೆಯು ೨೦೨೩-೨೪ನೇ ಸಾಲಿನ ತೋಟಗಾರಿಕೆ ಯಾಂತ್ರೀಕರಣ ಕಾರ್ಯಕ್ರಮದಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಣ್ಣ ಮತ್ತು ಅತಿ ಸಣ್ಣ ರೈತರು ಹಾಗೂ ಮಹಿಳಾ ಫಲಾನುಭವಿಗಳಿಗೆ ಶೇ.೫೦ ರಷ್ಟು ಹಾಗೂ ಸಾಮಾನ್ಯ ವರ್ಗದ ರೈತರಿಗೆ ಶೇ.೪೦ ರಷ್ಟು ಅಡಿಕೆ ಸಿಪ್ಪೆ ಸುಲಿಯುವ ಯಂತ್ರ,
ಕಳೆಕೊಚ್ಚುವ ಯಂತ್ರ, ಗೊರಬಲು ಮಿಷನ್ ಮತ್ತು ಇತರೆ ತೋಟಗಾರಿಕೆ ಯಂತ್ರೋಪಕರಣಗಳಿಗೆ ಸಹಾಯಧನ ವಿತರಿಸಲು ಹಾಗೂ ತೋಟಗಾರಿಕೆ ಅಭಿವೃದ್ಧಿ ಯೋಜನೆಯ ವಿನೂತನ ತಂತ್ರಜ್ಞಾನ ಕಾರ್ಯಕ್ರಮದಡಿ ಅಡಿಕೆ ದೋಟಿ ಹಾಗೂ ಸೋಲಾರ ಪಂಪ್ಸೆಟ್ ಘಟಕಗಳಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಇಲಾಖೆಯಿಂದ ನಿಗದಿತ ನಮೂನೆ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆ. ೨೨ ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಶಿಕಾರಿಪುರ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸುವುದು.