ಅಕ್ಟೋಬರ್ ೦೧ರಂದು ರಾತ್ರಿ ರಾಗಿಗುಡ್ಡದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅಪಪ್ರಚಾರಕ್ಕೆ ಕಿವಿಗೊಡಬೇಡಿ ಪೋಲಿಸ್ ಎನ್‌ಕೌಂಟರ್‌ನಲ್ಲಿ ಒಬ್ಬ ಮುಸ್ಲಿಂ ಯುವಕನ ಮೃತ್ಯುವಾಗಿದೆ ಎಂದು ಸುಳ್ಳು ಸುದ್ಧಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದ್ದು, ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ. ಮತ್ತು ಈ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವವರ ವಿರುದ್ಧ ಎಫ್.ಐ.ಆರ್. ದಾಖಲಾಗಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಗಲಭೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಗಾಯಗೊಂಡವರನ್ನು ಈಗಾಗಲೇ ಆಸ್ಪತ್ರೆಯಲ್ಲಿ ದಾಖಲಾಗಿಸಿದ್ದು, ಒಟ್ಟು ೧೨ ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಸುಳ್ಳುಸುದ್ದಿಗೆ ಕಿವಿಗೊಡಬೇಡಿ ಎಂದು ಅವರು ವಿನಂತಿಸಿದ್ದಾರೆ. ಈಗಾಗಲೇ ಘಟನೆಗೆ ಸಂಬಂಧಿಸಿದ್ದಂತೆ ೬೦ ಕ್ಕೂ ಜನರನ್ನು ಬಂಧಿಸಲಾಗಿದೆ.

ಮತ್ತು ಕೆಲವು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಘಟನ ಸ್ಥಳಗಳಲ್ಲಿ ಎರಡು ಓಮಿನಿ ಕಾರುಗಳು ಕಂಡುಬಂದಿದ್ದು, ಹೊರಗಿನವರು ಆ ವಾಹನದಲ್ಲಿ ಬಂದು ದಾಂಧಲೆ ಎಬ್ಬಿಸಿದ್ದಾರೆ ಎಂಬ ಪುಕಾರ್ ಹಬ್ಬಿದ್ದು, ಅದು ಕೂಡ ಸುಳ್ಳಾಗಿದ್ದು, ಆ ವಾಹನದಲ್ಲಿ ನ್ಯಾಮತಿಯಿಂದ ಅವರು ಈದ್‌ಮಿಲಾದ್ ಹಬ್ಬಕ್ಕೆ ಬಂದು ಮೆರವಣಿಗೆಯ ಬಳಿಕ ಶಾಂತಿನಗರದ

ಸಂಬಂಧಿಕರ ಮನೆಗೆ ಆಗಮಿಸಿದ್ದು, ಗಲಭೆಯ ಹಿನ್ನಲೆಯಲ್ಲಿ ಅವರು ವಾಪಾಸ್ಸು ತೆರಳಿದ್ದಾರೆ. ಈ ಬಗ್ಗೆ ಈಗಾಗಲೇ ಪೋಲಿಸರು ಸಂಪೂರ್ಣ ಮಾಹಿತಿ ಕಲೆಹಾಕಿದ್ದು, ಕೇಳಿ ಬರುತ್ತಿರುವ ಆರೋಪಗಳು ಸತ್ಯದೂರವಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!