ಬೆಂಗಳೂರು, ನ. 27: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ. ಸಚಿವ ಸಂಪುಟ ಸಭೆಯಲ್ಲಿಂದು ಅಧಿಕೃತವಾಗಿ ಅನುಮೋದನೆ ಪಡೆದುಕೊಂಡ ಬಳಿಕ ವಿಜಯನಗರ 31ನೇ ಜಿಲ್ಲೆ ಎಂದು ಸಚಿವ ಮಾಧುಸ್ವಾಮಿ ಅವರು ಘೋಷಣೆ ಮಾಡಿದರು.
ಈ ಮೂಲಕ ಸಚಿವ ಆನಂದ್ ಸಿಂಗ್ ಅವರ ಬಹುಕಾಲದ ಬೇಡಿಕೆ ಕೊನೆಗೂ ಈಡೇರಿದೆ. ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆ ರಚನೆ, ರೂಪುರೇಷೆಗಳ ಬಗ್ಗೆ ಚರ್ಚಿಸಲಾಗಿತ್ತು. ಈ ಬಗ್ಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದ್ದು, ಇದೀಗ ವಿಜಯನಗರ ನೂತನ ಜಿಲ್ಲೆ ಎಂದು ಅಧಿಕೃತಗೊಳಿಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು.

ವಿಜಯನಗರ ಜಿಲ್ಲೆ ಹೇಗಿರಲಿದೆ

  • ನೂತನ ಜಿಲ್ಲೆಯ ಗಡಿಗಳ ರೂಪುರೇಷೆಗೆ ಸಚಿವ ಸಂಪುಟದಲ್ಲಿ ಸಮ್ಮತಿ ಸಿಕ್ಕಿದೆ. ಬಳ್ಳಾರಿ ಜಿಲ್ಲೆಯಿಂದ ವಿಭಜಿಸಿ ಹೊಸ ಜಿಲ್ಲೆ ರೂಪುಗೊಂಡಿದೆ.
  • ನೂತನ ವಿಜಯನಗರ ಜಿಲ್ಲೆಯಲ್ಲಿ ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದ್ದು, ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಕಂಪ್ಲಿ, ಕೊಟ್ಟೂರು, ಹೂವಿನ ಹಡಗಲಿ ತಾಲೂಕುಗಳಿರಲಿವೆ.
  • ಬಳ್ಳಾರಿ 11 ಕಂದಾಯ ತಾಲೂಕು, 3 ಕಂದಾಯ ಉಪ ವಿಭಾಗಗಳನ್ನು ಹೊಂದಿರುವ ದೊಡ್ಡ ಜಿಲ್ಲೆಯಾಗಿತ್ತು.ಈಗ ಬಳ್ಳಾರಿ ಜಿಲ್ಲೆಯಲ್ಲಿ ಕುರುಗೋಡು, ಸಿರಗುಪ್ಪ, ಸಂಡೂರು ಹಾಗೂ ಕೂಡ್ಲಿಗಿ ತಾಲೂಕು ಉಳಿಸಿಕೊಳ್ಳಲಾಗುತ್ತದೆ.

By admin

ನಿಮ್ಮದೊಂದು ಉತ್ತರ

error: Content is protected !!