ಬೆಂಗಳೂರು,ಅ.25:

ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ಅವರು ತಮ್ಮ ನೂರಾರು ಬೆಂಬಲಿಗರೊಂದಿಗೆ ಇಂದು ಅಧಿಕಾರ ಕಾಂಗ್ರೆಸ್ ಪಕ್ಷ ಸೇರ್ಪಡೆ ಗೊಂಡರು.
ಕಳೆದ ಒಂದು ತಿಂಗಳ ಹಿಂದೆಯಷ್ಟೆ ಜೆಡಿಎಸ್ ತೊರೆಯುವ ಬಗ್ಗೆ ಘೋಷಣೆ ಮಾಡಿದ್ದ ಎಂ. ಶ್ರೀಕಾಂತ್ ಅವರು ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತ ವಾಗಿ ಕಾಂಗ್ರೆಸ್ ಸೇರಿದರು.
ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಶ್ರೀಕಾಂತ್ ಮತ್ತು ಅವರ ಬೆಂಬಲಿಗ ಜೆಡಿಎಸ್ ಮುಖಂಡರುಗಳನ್ನು ಪಕ್ಷಕ್ಕೆ ಬರಮಾಡಿ ಕೊಂಡರು


ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯ ನಾಗರಾಜಕಂಕಾರಿ, ಮಾಜಿ ಉಪಮೇಯರ್ ಪಾಲಾಕ್ಷಿ, ಯುವ ಜೆಡಿಎಸ್ ಪದಾಧಿಕಾರಿ ಗಳಾದ ಸೂಲಯ್ಯ ಸೇರಿದಂತೆ ಅನೇಕ ಮುಖಂಡರು, ಜೆಡಿಎಸ್ ವಿವಿಧ ಘಟಕಗಳ ಪದಾಧಿಕಾರಿಗಳು ಕಾಂಗ್ರೆಸ್ ಸೇರಿದರು.
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ರಾಜ್ಯ ವಕ್ತಾರ ಆಯನೂರು ಮಂಜುನಾಥ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ, ಶ್ರೀಮತಿ ಗೀತಾ ಶಿವರಾಜಕುಮಾರ್, ಕೆಪಿಸಿಸಿ ಉಪಾಧ್ಯಕ್ಷ ಚಂದ್ರಪ್ಪ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಮತ್ತಿತರರು ಈ ಸಂದರ್ಭದಲ್ಲಿದ್ದರು‌

By admin

ನಿಮ್ಮದೊಂದು ಉತ್ತರ

error: Content is protected !!