ಶಿವಮೊಗ್ಗ: ದೈವಜ್ಞ ಸಮಾಜ ಸ್ವಾಭಿಮಾನಿ ಸಮಾಜವಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಅವರು ಭಾನುವಾರ ನಗರದ ಮಲ್ಲಿಗೆನಹಳ್ಳಿಯ ವಾಜಪೇಯಿ ಬಡಾವಣೆಯಲ್ಲಿ, ರಾಜ್ಯ ಕನ್ನಡ ದೈವಜ್ಞ ಬ್ರಾಹ್ಮಣ ಸಂಘದ ಕಾರ್ಯಾಲಯ ಉದ್ಘಾಟನೆ ಹಾಗೂ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ ಮತ್ತು ಶ್ರೀ ಹಯಗ್ರೀವ ಪೂಜೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಸಮಾಜದ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರು ಕೈಜೋಡಿಸಿದರೆ ಮಾತ್ರ ಏನಾದರೂ ಸಾಧನೆ ಮಾಡಲು ಸಾಧ್ಯ, ನಗರದಲ್ಲಿ ನಿರ್ಮಾಣವಾಗುವ ದೈವಜ್ಞ ಭವನ ಕಟ್ಟಡಕ್ಕೆ ಸರ್ಕಾರದ ವತಿಯಿಂದ ಅನುದಾನ ಒದಗಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ದೈವಜ್ಞ ಸಮಾಜದ ಜೊತೆ ಯಾವಾಗಲೂ ಇರುತ್ತೇನೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿದ ಕರ್ಕಿ ಶ್ರೀ ಜ್ಞಾನೇಶ್ವರಿ ಪೀಠದ ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾಸ್ವಾಮೀಜಿ, ದೇವರನ್ನು ಅರಿತವರು ದೈವಜ್ಞ ಬ್ರಾಹ್ಮಣರು, ಭಾ? ಯಾವುದೇ ಇರಲಿ ಭಾವನೆ ಎಲ್ಲರಲ್ಲೂ ಒಂದೇ ಇರಬೇಕು, ಭಾವನೆಗಳಿಗೆ ಸ್ಪಂದಿಸುವ ಭಾ? ಬೇಕು. ಭಾವನೆ ಪ್ರಾಮುಖ್ಯತೆ ಪಡೆಯುತ್ತದೆ ಎಂದರು.
ದೈವಜ್ಞರಲ್ಲಿ ಮರಾಠಿ, ಕೊಂಕಣಿ, ಕನ್ನಡ ಭಾ? ಮಾತನಾಡುವವರು ಇದ್ದಾರೆ, ಪ್ರತಿಯೊಬ್ಬರಲ್ಲೂ ಹರಿಯುತ್ತಿರುವುದು ರಕ್ತ ಒಂದೇ. ಎಲ್ಲರೂ ಸೇರಿದರೆ ಸಂಘಟನೆ ಮಾಡಲು ಸಾಧ್ಯ, ಯಾವುದೇ ಕೆಲಸ ಒಬ್ಬರಿಂದ ಸಾಧ್ಯವಿಲ್ಲ, ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ನೀಡುವ ಕೆಲಸ ಆಗಬೇಕಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಜ್ಯ ಕನ್ನಡ ದೈವಜ್ಞ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಎನ್. ಕೃ?ಮೂರ್ತಿ ಮಾತನಾಡಿ, ಸಮಾಜದಲ್ಲಿ ಯಾರೂ ದೊಡ್ಡವರಲ್ಲ, ಯಾರು ಸಣ್ಣವರಲ್ಲ,
ಸಮಾಜಕ್ಕಾಗಿ ಅಳಿಲು ಸೇವೆ ಮಾಡಿದವರನ್ನು ನಾವೆಲ್ಲರೂ ಸ್ಮರಿಸಬೇಕು, ಸುಮಾರು ಆರು ಕೋಟಿ ರೂ ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಸಮಾಜ ಬಾಂಧವರ ಸಹಕಾರ ಅಗತ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜ್ಞಾನೇಶ್ವರ, ಸಂಘದ ಗೌರವಾಧ್ಯಕ್ಷ ಜಗನ್ನಾಥ್, ಉಪಾಧ್ಯಕ್ಷ ಮಂಜುನಾಥ್, ಖಜಾಂಚಿ ರಾಮಚಂದ್ರ, ಸಹಕಾರ್ಯದರ್ಶಿ ಮಂಜುನಾಥ್, ಲೋಕೇಶ್ ಸೇರಿದಂತೆ, ಸಂಘದ ನಿರ್ದೇಶಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಮಾಜದ ಪ್ರತಿಭಾನ್ವಿತ ೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಹಾಗೂ ಕಟ್ಟಡದ ದಾನಿಗಳಿಗೆ ಇದೆ ವೇಳೆ ಅಭಿನಂದಿಸಲಾಯಿತು.
ಕಾರ್ಯಕ್ರಮಕ್ಕೂ ಮುನ್ನ ಶ್ರೀಗಳಿಗೆ ಮಾತೆಯರು ಪೂರ್ಣ ಕುಂಭ ಸ್ವಾಗತ ನೀಡಿದರು, ಶಿವಮೊಗ್ಗ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಯ ದೈವಜ್ಞ ಬಂಧುಗಳು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು