ಸಾಗರ : ತಾಲ್ಲೂಕಿನ ಹೆಗ್ಗೋಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೇಡಲಸರ ಸಂಸ್ಕೃತ ಶಾಲಾವರಣದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸಂಬಂಧಪಟ್ಟ ಪೈಪ್ ಕಳ್ಳತನಕ್ಕೆ ಸಂಬಂಧಪಟ್ಟಂತೆ ಗ್ರಾಮಾಂತರ ಠಾಣೆ ಪೊಲೀಸರು ಮಾಲುಸಹಿತ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಅಳವಡಿಸಲು ತಂದಿರಿಸಿದ್ದ ಪೈಪ್ಗಳನ್ನು ಅ. ೨೨ರಿಂದ ಅ. ೨೫ರ ಮಧ್ಯದ ಅವಧಿಯಲ್ಲಿ ಕಳ್ಳತನವಾಗಿರುವುದಕ್ಕೆ ಸಂಬಂಧಪಟ್ಟಂತೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಗ್ರಾಮಾಂತರ ಠಾಣೆ ಪೊಲೀಸರು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ಕುಮಾರ್, ಹೆಚ್ಚುವರಿ ಪೊಲೀಸ್
ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ಇವರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಗೋಪಾಲಕೃಷ್ಣ ನಾಯ್ಕ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹೊಸೂರು ಗ್ರಾಮದ ವೇಗರಾಜ್ ಯಾನೆ ರಾಜ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು.
ವಿಚಾರಣೆ ವೇಳೆ ವೇಗರಾಜ್ ಹಾಗೂ ಇತರೆ ಮೂವರು ಆರೋಪಿಗಳು ಪೈಪ್ಗಳನ್ನು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
ಕಾರ್ಯಾಚರಣೆಯಲ್ಲಿ ೧.೧೫ ಲಕ್ಷ ರೂ. ಮೊತ್ತದ ಪೈಪ್, ಕೃತ್ಯಕ್ಕೆ ಬಳಸಿದ ೧.೫೦ ಲಕ್ಷ ರೂ. ಮೌಲ್ಯದ ಟಾಟಾ ಸೂಪರ್ ಏಸ್ ವಾಹನ ವಶಕ್ಕೆ ಪಡೆಯಲಾಗಿದೆ.
ಕಾರ್ಯಾಚರಣೆಯಲ್ಲಿ ಸಿಪಿಐ ಮಹಾಬಲೇಶ್ವರ ಎಸ್.ಎನ್., ಪಿಎಸ್ಐ ನಾರಾಯಣ ಮಧುಗಿರಿ, ಸಿಬ್ಬಂದಿಗಳಾದ ಸನಾವುಲ್ಲಾ, ಶೇಖ್ ಫೈರೋಜ್ ಅಹ್ಮದ್, ರವಿಕುಮಾರ್ ಇನ್ನಿತರರು ಪಾಲ್ಗೊಂಡಿದ್ದರು.