ಶಿವಮೊಗ್ಗ ನವೆಂಬರ್ ೨೨; (ಕರ್ನಾಟಕ ವಾರ್ತೆ): ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಯುಪಿಎಸ್‌ಸಿ (UPSಅ) ನಾಗರೀಕ ಸೇವೆ ಹಾಗೂ ಬ್ಯಾಂಕಿಂಗ್ ಪಿ.ಓ. (ಃಂಓಏIಓಉ P.ಔ) ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿಗಾಗಿ ಹಿಂದುಳಿದ ವರ್ಗಗಗಳ ಪ್ರವರ್ಗ -೧, ೨ಎ, ೩ಎ ಹಾಗೂ ೩ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಥಿಗಳು ಅಂಗೀಕೃತ ವಿಶ್ವ ವಿದ್ಯಾಲಯದಿಂದ ಯಾವುದಾದರೊಂದು ಪದವಿ ಪಡೆದಿರಬೇಕು, ಹಿಂದುಳಿದ ವರ್ಗಗಗಳ ಪ್ರವರ್ಗ -೧, ೨ಎ, ೩ಎ ಹಾಗೂ ೩ಬಿ ಗಳಿಗೆ ಸೇರಿದ ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಯ ರೂ. ೫.೦೦ಲಕ್ಷಗಳ ಮಿತಿಯಲ್ಲಿರಬೇಕು
. ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದವರು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಪರೀಕ್ಷಾ ಕೇಂದ್ರಗಳು, ದಿನಾಂಕ ಮತ್ತು ಸಮಯವನ್ನು ನಂತರದ ದಿನಗಳಲ್ಲಿ ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.
ಆಸಕ್ತ ವಿದ್ಯಾರ್ಥಿಗಳುÀÄ https://bcwd.karnataka.gov.in ಮೂಲಕ ದಿ: ೦೪/೧೨/೨೦೨೩ ರೊಳಗಾಗಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ ಅಥವಾ ಸಹಾಯವಾಣಿ ಸಂ.: ೮೦೫೦೭೭೦೦೦೪ ನ್ನು ಸಂಪರ್ಕಿಸುವುದು.