ಶರಾವತಿ ಮುಳುಗಡೆ ಸಂತ್ರಸ್ತರ ಜಮೀಗೆ ಹಕ್ಕುಪತ್ರ ನೀಡಲು ಅರಣ್ಯ ಭೂಮಿಯನ್ನು ಡಿ ನೋಟಿಫೈ ಮಾಡಲು ಸುಪ್ರೀಂ ಕೋರ್ಟ್‌ನ ಒಪ್ಪಿಗೆ ಪಡೆಯುಲು ಕೇಂದ್ರದ ನಿರ್ದೇಶನದಂತೆ ರಾಜ್ಯ ಸರ್ಕಾರ ಕೂಡಲೇ ಕ್ರಮಕೈಗೊಳ್ಳಬೇಕೆಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಮನವಿ ಮಾಡಿದ್ದಾರೆ.3
ಮೊನ್ನೆ ಬಿ.ವೈ.ರಾಘವೇಂದ್ರ ಅವರು ಲೋಕಸಭಾ ಪ್ರಶ್ನಾವಳಿ ಸಮಯದಲ್ಲಿ ಶರಾವತಿ ಹೈಡ್ರೋಪವರ್ ಪ್ರಾಜೆಕ್ಟ್‌ನಿಂದ ನಿರಾಶ್ರಿತ ರಾದ ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ನೀಡಲು ಸುಮಾರು ೯,೧೩೯ ಎಕರೆ ಪ್ರದೇಶವನ್ನು ಡಿ-ನೋಟೀಫೈ ಮಾಡಲು ಕೇಂದ್ರ ಸರ್ಕಾರ ಕೈಗೊಂಡಿದ್ದ ಕ್ರಮಗಳ ಬಗ್ಗೆ ಮಾಹಿತಿ ಕೋರಿದ್ದರು.
ಈ ಪ್ರಶ್ನೆಗೆ ಅರಣ್ಯ ಪರಿಸರ ಮತ್ತು ತಾಪಮಾನ ಬದಲಾವಣೆ ಖಾತೆಯ ರಾಜ್ಯ ಸಚಿವ ಅಶ್ವಿನ್ ಕುಮಾರ್ ಚೌಬೆ ಅವರು ಉತ್ತರಿಸಿದ್ದು, ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಇದೇ ಮಾರ್ಚ್‌ನಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. ಅರಣ್ಯಗಳು ಹಾಗೂ ರಾಷ್ಟ್ರೀಯ ಉದ್ಯಾನಗ ಳನ್ನು ಡಿ-ನೋಟೀಫಿಕೇಶನ್ ಮಾಡಬಾ ರದು ಎಂದು ಸುಪ್ರೀಂ ಕೋರ್ಟ್ ಸೂಚಿಸಿ ದ್ದು,
ಅದರ ಆದೇಶದಂತೆ ಕ್ರಮಕೈಗೊಳ್ಳಲಾ ಗುತ್ತದೆ ಎಂದು ಉತ್ತರಿಸಿದ್ದರು. ಈ ನಿಟ್ಟಿನಲ್ಲಿ ರಾಘವೇಂದ್ರ ಅವರು ಶರಾವತಿ ಮುಳುಗಡೆ ಸಂತ್ರಸ್ತರ ಹಿತ ಕಾಪಾಡುವಲ್ಲಿ ಸುಪ್ರೀಂ ಕೋರ್ಟ್‌ಗೆ ಸೂಕ್ತ ಹಾಗೂ ಸಮಂಜಸವಾದ ವಾದ ಮಂಡಿಸಿ ಅನುಮತಿ ಪಡೆದು ಕೇಂದ್ರ ಸರ್ಕಾರಕ್ಕೆ ಡಿ-ನೋಟೀಫೈ ಮಾಡಲು ಪ್ರಸ್ತಾವನೆ ಸಲ್ಲಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಸಂಸದರು ಮನವಿ ಮಾಡಿದ್ದಾರೆ.