ಶಿವಮೊಗ್ಗ: ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಸಮಸ್ಯೆ ಆಲಿಸಿ ವಿದ್ಯಾರ್ಥಿಗಳ ತರಗತಿಗಳು ಸುಗಮವಾಗಿ ನಡೆಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಇಂದು ಡಿಸಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.


ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು. ಅವರಿಗೆ ಯುಜಿಸಿ ನಿಯಮಾವಳಿ ಪ್ರಕಾರ ವೇತನ ನೀಡಬೇಕು. ಸರ್ಕಾರಿ ನೌಕರರಿಗೆ ನೀಡುವ ಹಾಗೆ ಪ್ರತಿ ತಿಂಗಳು ಸಂಬಳ ನೀಡಬೇಕು.

ಸರ್ಕಾರ ಕೂಡಲೇ ರಾಜ್ಯದ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಬೇಕು. ಅತಿಥಿ ಉಪನ್ಯಾಸಕರು ಕಾನೂನಾತ್ಮಕವಾಗಿ ಹೋರಾಟ ಮುಂದುವರೆಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ತರಗತಿ ಬಹಿಷ್ಕಾರ ಹಿಂಪಡೆದು ಪಾಠ ಪ್ರವಚನ ಆರಂಭಿಸಬೇಕು ಎಂದು ಆಗ್ರಹಿಸಿದರು.


ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಕಾರ್ಯದರ್ಶಿ ಪ್ರವೀಣ್ ಹೆಚ್.ಕೆ., ರವಿ, ಸಚಿನ್, ಅಭಿ, ಲೋಹಿತ್, ದರ್ಶನ್, ಹರ್ಷಿತಾ, ಪವಿತ್ರಾ, ಯಶಸ್ವಿನಿ ಮತ್ತಿತರರು ಇದ್ದರು.

By admin

ನಿಮ್ಮದೊಂದು ಉತ್ತರ

error: Content is protected !!