ಸಂಸದ ಬಿ.ವೈ.ರಾಘವೇಂದ್ರರವರು ಗಡಿಬಿಡಿಯಲ್ಲಿ ಶಿಷ್ಟಚಾರವನ್ನು ಉಲಂಘಿಸಿ ಬೈಪಾಸ್ ರಸ್ತೆಯ ಸೇತುವೆಯನ್ನು ಉದ್ಘಾಟಿಸಿದ್ದಾರೆ. ಇದು ಸರ್ಕಾರಿ ಕಾರ್ಯಕ್ರ ಮವಾಗದೆ ಬಿಜೆಪಿ ಕಾರ್ಯಕ್ರಮವಾಗಿದೆ ಎಂದು ಕೆ.ಪಿ.ಸಿ.ಸಿ.ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದರು.


ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಸದ ಬಿ.ವೈ.ರಾಘವೇಂದ್ರ ರವರು ಇತ್ತೀಚೆಗೆ ಕಾಮಗಾರಿಗಳು ಮುಗಿ ಯದೇ ಮತ್ತು ಮುಗಿದಿದೆ ಎಂದು ಅಧಿಕಾರಿ ಗಳ ಪ್ರಮಾಣ ಪತ್ರ ಇಲ್ಲದೆ ಗಡಿಬಿಡಿಯಲ್ಲಿ ತಾವೇ ಟೇಪು ಕಟ್ಟ್‌ಮಾಡಿ ಉದ್ಘಾಟನೆ ಮಾಡುತ್ತಾರೆ. ಇಂತಹ ಉದ್ಘಾಟನ ಕಾರ್ಯ ಕ್ರಮಗಳಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಗೊತ್ತಿರುವುದಿಲ್ಲ. ಕೆಲವು ಬಿಜೆಪಿ ಮುಖಂಡ ರನ್ನು ಹಿಂಬಾಲಕರನ್ನು ಕರೆದುಕೊಂಡು ಹೋಗಿ ಉದ್ಘಾಟನೆ ಮಾಡುವ ಈ ಪರಿ ಅತ್ಯಂತ ಕೆಟ್ಟ ಸಂಸ್ಕೃತಿ ಯಾಗಿದೆ ಎಂದು ಟೀಕಿಸಿದರು.

https://tungataranga.com/?p=26089
ಮಾತೆಯರಿಂದ ತುಂಗಾ ತರಂಗ ಪತ್ರಿಕೆಯ “ತುಂಗೆಯ ವರುಣಾಂತರಂಗ” ವಿಶೇಷಾಂಕ ಬಿಡುಗಡೆ.., ಹೇಗಿತ್ತು ಗೊತ್ತಾ ನಿಮ್ ಪತ್ರಿಕೆಯ ಸರಳ ಸುಂದರ ಹಬ್ಬ ಲಿಂಕ್ ಬಳಸಿ ಓದಿ


ನೆನ್ನೆ ಕೂಡ ಸೇತುವೆಯನ್ನು ಸಂಸದರು ಉದ್ಘಾಟಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಬಿಜೆಪಿಯ ಶಾಸಕರುಗಳಾದ ರುದ್ರೇಗೌಡರಾ ಗಲಿ, ಅರುಣ್‌ರವರಾಗಲಿ, ಚೆನ್ನಬಸಪ್ಪನವ ರಾಗಲಿ ಕರೆದಿಲ್ಲ. ಅಧಿಕಾರಿಗಳನ್ನು ಕೇಳಿದರೆ, ನಮಗೆ ಗೊತ್ತೇ ಇಲ್ಲ ಎನ್ನುತ್ತಾರೆ. ಇದು ಸರ್ಕಾರದ ಕಾರ್ಯಕ್ರಮವಲ್ಲವೇ, ಅಧಿಕಾರಿ ಗಳು ಈ ಕಾರ್ಯಕ್ರಮವನ್ನು ರೂಪಿಸಬೇಕು. ಅದನ್ನು ಬಿಟ್ಟು ಕೇವಲ ಕೆಲವು ಬಿಜೆಪಿ ಮುಖಂಡರನ್ನು ಇಟ್ಟುಕೊಂಡು ಈ ರೀತಿ ಉದ್ಘಾಟನೆಗಳನ್ನು (ಚುನಾವಣೆಯ ಹಿನ್ನೆಲೆಯಲ್ಲಿ ಮಾಡುತ್ತಾ ಹೊರಟಿರುವುದು ಸರಿಯಲ್ಲ ಎಂದರು.


ಸಿಗಂಧರು ಸೇತುವೆಗೆ ಬಿಜೆಪಿಯ ರಾಷ್ಟ್ರೀಯ ನಾಯಕ ಗಡ್ಕಾರಿರವರೇ ಶಂಕು ಸ್ಥಾಪನೆ ಮಾಡಿದ್ದರು. ಆ ಕೆಲಸ ಎಲ್ಲಿ ಸಾಗಿದೆ ಅಲ್ಲೇಕೆ ವೇಗವಾಗಿ ಮಾಡುತ್ತಿಲ್ಲ. ತಾಳುಗೊಪ್ಪದಿಂದ ಲಯನ್ ಸಫಾರಿಯವರೆಗೆ ೪ ಪಥ ರಸ್ತೆಗೆ ೬೫೦ ಕೋಟಿ ಎಂದು ಹೇಳಲಾಗುತ್ತಿದೆ. ಹಿಂದೆ ೬ ಸಾವಿರ ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಎಂದಿದ್ದರು. ಹೀಗೇ ಒಂದೊಂದು ಕಾಮಗಾರಿಗೆ ಪದೇ ಪದೇ ಪ್ರತ್ಯೇಕವಾಗಿ ಹೆಸರಿಸುತ್ತ ತಾವು ಬಹಳ ಸಂಖ್ಯೆಯಲ್ಲಿ ಕಾಮಗಾರಿಗಳನ್ನು ಮಾಡಿರುವೆ ಎಂದು ಸಂಸದರು ಹೇಳಲು ಹೊರಟಂತೆ ಇದೆ ಎಂದರು.


ಪತ್ರಿಕಾಗೋಷ್ಠಿಯಲ್ಲಿ ಕೆ.ಪಿ.ಸಿ.ಸಿ. ಸದಸ್ಯ ವೈ.ಹೆಚ್.ನಾಗರಾಜ್ ಪ್ರಮುಖರಾದ ಹಿರಣ್ಣಯ್ಯ, ಜಿ.ಪದನಾಬ್, ಶಿ.ಜು.ಪಾಶ, ಧೀರರಾಜ್ ಹೊನ್ನಾವಿಲೆ, ಲೋಕೇಶ್, ಆಯನೂರು ಸಂತೋಷ್, ಕೃಷ್ಣ, ಐಡಿಯಲ್ ಗೋಪಿ ಇದ್ದರು.

By admin

ನಿಮ್ಮದೊಂದು ಉತ್ತರ

error: Content is protected !!