ಶಿವಮೊಗ್ಗ,ಡಿ.೧೯: ಸಂಸತ್‌ನಲ್ಲಿ ನಡೆದ ಸ್ಮೋಕರ್ ಬಾಂಬ್ ಘಟನೆಗೆ ಸಂಬಂಧಿಸಿದಂತೆ ಮೈಸೂರು ಸಂಸದ ಮನೋರಂಜನ್ ಎಂಬುವವರಿಗೆ ಪಾಸ್ ನೀಡಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಪ್ರತಿಭಟನ ಮೆರವಣಿಗೆ ನಡೆಸಿ ಮಹಾವೀರ ವೃತ್ತದಲ್ಲಿ ಸಂಸದ ಪ್ರತಾಪ್ ಸಿಂಹರವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.


ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಪ್ರಧಾನಿಗೆ ಮೋದಿಯವರ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು ಪ್ರತಾಪ್ ಸಿಂಹರವರ ವಿರುದ್ಧವು ಘೋಷಣೆ ಕೂಗಿ ಇಡೀ ಘಟನೆಯನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ಮೈಸೂರು ಸಂಸದ ಪ್ರತಾಪ್ ಸಿಂಹರವರನ್ನು ತಕ್ಷಣವೇ ಬಂಧಿಸಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಇದೊಂದು ಗಂಭೀರ ವಿಷಯವಾಗಿದೆ. ಮೈಸೂರಿನ ಮನೋರಂಜನ್ ಸೇರಿದಂತೆ ಸುಮಾರು ೬ ಜನರ ತಂಡ ಇದರ ಹಿಂದೆ ಇದೆ. ಮೈಸುರನ್ನೇ ಇವರು ಕೇಂದ್ರವಾಗಿ ಇಟ್ಟುಕೊಂಡಿದ್ದಾರೆ. ಸಂಸದ ಪ್ರತಾಪ ಸಿಂಹ ಮನೋರಂಜನಿಗೆ ಪಾಸ್ ನೀಡಿದ್ದಾನೆ. ಹಾಗೆಯೇ ಇನ್ನೊಬ್ಬನಿಗೆ ಇವರ ಕಚೇರಿಯಿಂದಲೇ ಪಾಸ್ ಹೋಗಿದೆ. ಸಂಸತ್ ಮೇಲೆ ದಾಳಿ ಎನ್ನುವುದು ಸುಲಭದ ವಿಷಯವೇ, ಕೇಂದ್ರ ಸರ್ಕಾರ ಇದನ್ನೇಕೆ ಗಂಭೀರವಾಗಿ ತೆಗೆದು ಕೊಂಡಿಲ್ಲ. ಬಿಜೆಪಿಗರು ಈ ಬಗ್ಗೆ ಚಕಾರಕೂಡ ಎತ್ತುತ್ತಿಲ್ಲ. ಮೋದಿ, ಅಮಿತ್‌ಷಾ ಸೇರಿದಂತೆ ಎಲ್ಲರೂ ಮೌನವಾಗಿದ್ದಾರೆ ಎಂದು ಆರೋಪಿಸಿದರು.


ಪ್ರತಿಭಟನೆಯಲ್ಲಿ ಪ್ರಮುಖರಾದ ಆರ್. ಪ್ರಸನ್ನಕುಮಾರ್, ಎನ್.ರಮೇಶ್, ಚಂದ್ರಭೂಪಾಲ್, ಸೌಗಂಧಿಕ, ಎಸ್.ಟಿ.ಚಂದ್ರಶೇಖರ್, ಹೆಚ್.ಪಿ. ಗಿರೀಶ್, ಹೆಚ್.ಸಿ.ಯೋಗೀಶ್, ಇಸ್ಮಾಯಿಲ್ ಖಾನ್, ಕಲೀಂ ಪಾಷಾ, ಶಿವಕುಮಾರ್, ಕೆ.ರಂಗನಾಥ್, ಜಿ.ಡಿ.ಮಂಜುನಾಥ್, ಯಮುನಾ ರಂಗೇಗೌಡ, ಸ್ಟೆಲಾ ಮಾರ್ಟಿನ್, ಸುವರ್ಣ ನಾಗರಾಜ್, ನಾಜೀಮಾ, ಪ್ರೇಮಾ ಎನ್. ಶೆಟ್ಟಿ, ರೇಷ್ಮಾ, ಶಿ.ಜು.ಪಾಶಾ, ಜಿ.ಪದ್ಮನಾಬ್, ಗಾಡಿಕೊಪ್ಪ ರಾಜಣ್ಣ, ಇಕ್ಕೇರಿ ರಮೇಶ್, ಕುಮರೇಶ್, ಪಾಲಾಕ್ಷಿ, ನಾಗರಾಜ್ ಕಂಕಾರಿ, ಎಂ. ಪ್ರವೀಣ್ ಕುಮಾರ್ ಸೇರಿದಂತೆ ಹಲವರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!