ಸಾಂದರ್ಭಿಕ ಚಿತ್ರ

ಬೆಂಗಳೂರು,ಡಿ.14:
ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಇದರ ಬೆನ್ನಲ್ಲೇ ರಾಜ್ಯದ ಹಲವೆಡೆ ಬಸ್ ಸಂಚಾರ ಆರಂಭವಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಮಾಧ್ಯಮಗಳ ಮೂಲಕ ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್ ಬಗ್ಗೆ ಮಾಹಿತಿ ಗೊತ್ತಾಗಿದೆ. ನಾನು ಯಾರ ಬಗ್ಗೆಯೂ ಟೀಕೆ-ಟಿಪ್ಪಣಿ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಅಂತ್ಯಗೊಳ್ಳುವ ಸಾಧ್ಯತೆ ಇದ್ದು, ಅಧಿಕೃತ ನಿರ್ಧಾರ ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳುವ ಸಾಧ್ಯತೆ ಇದೆ.
ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕು, ಕೋವಿಡ್‌ ನಿಂದ ಮೃತಪಟ್ಟ ನೌಕರರ ಕುಟುಂಬಕ್ಕೆ 30 ಲಕ್ಷ ಪರಿಹಾರ, ಮೇಲಾಧಿಕಾರಿಗಳ ಕಿರುಕುಳಕ್ಕೆ ಬ್ರೇಕ್‌, ವೇತನ ಹೆಚ್ಚಳ ಹಾಗೂ ತಾರತಮ್ಯ ನಿವಾರಣೆ ವಿಚಾರಗಳನ್ನು ಮುಂದಿಟ್ಟುಕೊಂಡು ಕಳೆದ ನಾಲ್ಕು ದಿನಗಳಿಂದ ನಾಲ್ಕು ವಿಭಾಗಗಳ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ

By admin

ನಿಮ್ಮದೊಂದು ಉತ್ತರ

error: Content is protected !!