ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಧರ್ಮಾಧಿಕಾರಿ ಎಸ್. ರಾಮಪ್ಪ ನೇತೃತ್ವದಲ್ಲಿ ಜನವರಿ ೧೪ ಮತ್ತು ೧೫ ರಂದು ಮಕರ ಸಂಕ್ರಮಣ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ದೇವಳ ಆಡಳಿತ ಮಂಡಳಿ ತಿಳಿಸಿದೆ.


೧೪ರಂದು ಪ್ರಾತಃಕಾಲ ೪ ಗಂಟೆಗೆ ಮಹಾಭಿಷೇಕ, ಅಲಂಕಾರ, ಆಭರಣ ಪೂಜೆ, ಚಂಡಿಕಾ ಹೋಮ ನೆರವೇರಲಿದ್ದು, ಈ ಬಾರಿಯ ಜಾತ್ರಾ ಮಹೋತ್ಸವಕ್ಕೆ ಆರ್ಯ ಈಡಿಗ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ. ತಿಮ್ಮೇಗೌಡ ಚಾಲನೆ ನೀಡಲಿದ್ದಾರೆ.


ಬೆಳಿಗ್ಗೆ ೮ ಗಂಟೆಗೆ ರಥ ಪೂಜೆಯೊಂದಿಗೆ ದೇವಿ ಮೂಲ ಸ್ಥಾನಕ್ಕೆ ಹೊರಡಲಿದ್ದು, ಕೇರಳದ ಶಿವಗಿರಿಯ ಬ್ರಹ್ಮಶ್ರೀ ನಾರಾಯಣ ಗುರು ಮಠದ ಪೀಠಾಧಿಪತಿ ಸಚ್ಚಿದಾನಂದ ಸ್ವಾಮೀಜಿ ಸೀಗೇ ಕಣಿವೆಯಲ್ಲಿ ಧರ್ಮ ಜ್ಯೋತಿಗೆ ಚಾಲನೆ ನೀಡಲಿದ್ದಾರೆ.


ಮಧ್ಯಾಹ್ನ ೧೨ ಗಂಟೆಗೆ ಜ್ಯೋತಿ ದೇವಸ್ಥಾನ ಪ್ರವೇಶ ಮಾಡಲಿದೆ. ರಂಭಾಪುರಿ ಮಹಾಸಂಸ್ಥಾನ ಮಳಲಿ ಮಠದ ಗುರು ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಅದೇ ದಿನ ರಾತ್ರಿ ೯.೩೦ಕ್ಕೆ ಸಿಗಂದೂರು ಮೇಳದಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ.


೧೫ರ ಬೆಳಿಗ್ಗೆ ೫ರಿಂದ ನವ ಚಂಡಿಕಾ ಹೋಮ, ರಾತ್ರಿ ೮ ಗಂಟೆಗೆ ದುರ್ಗಾ ದೀಪ ನಮಸ್ಕಾರ, ಗುರು ಪೂಜೆ, ದೇವಿ ಪಾರಾಯಣ, ರಂಗಪೂಜೆ, ರಾತ್ರಿ ೮.೩೦ರಿಂದ ಕುದ್ರೋಳಿ ಗಣೇಶ ಮತ್ತು ಬಳಗದಿಂದ ಮ್ಯಾಜಿಕ್ ಶೋ ನಡೆಯಲಿದೆ. ಜಾತ್ರೆಯ ಪ್ರಯುಕ್ತ ೯ ದಿನಗಳ ಕಾಲ ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಳದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಎಚ್.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!