ಶಿವಮೊಗ್ಗ: ಮಂಗನ ಕಾಯಿಲೆಯಿಂದ (ಕೆಎಫ್ ಡಿ) ಬಳಲುತ್ತಿದ್ದ 18 ವರ್ಷದ ಯುವತಿ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.


ಹೊಸನಗರದ ಅರಮನೆ ಕೊಪ್ಪ ವ್ಯಾಪ್ತಿಯ ಗ್ರಾಮವೊಂದರ ಯುವತಿಗೆ ವಾರದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಏಕಾಏಕಿ ಜ್ವರ ಉಲ್ಬಣಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಅಲ್ಲಿ ಕೆಎಫ್ ಡಿ ಟೆಸ್ಟ್ ನಡೆಸಿದಾಗ ಮೊದಲ ಬಾರಿ ನೆಗೆಟಿವ್, ಎರಡನೇ ಬಾರಿ ಪಾಸಿಟಿವ್ ಬಂದಿತ್ತು.
ಮೆಗ್ಗಾನ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದ ಯುವತಿಯನ್ನು ಶುಕ್ರವಾರ ಸಂಜೆ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಹುಅಂಗಾಂಗ ವೈಫಲ್ಯದಿಂದ ಸೋಮವಾರ ಬೆಳಗ್ಗೆ ಯುವತಿ ಸಾವನ್ನಪ್ಪಿದ್ದಾಳೆ.
ಈವರೆಗೆ ಮೂರು ಮಂದಿಗೆ ಪಾಸಿಟಿವ್ ಬಂದಿದ್ದು ಒಬ್ಬರು ಮೃತಪಟ್ಟಿದ್ದಾರೆ.

By admin

ನಿಮ್ಮದೊಂದು ಉತ್ತರ

You missed

error: Content is protected !!