ಶಿವಮೊಗ್ಗ: ನಾವು ಶ್ರೀರಾಮಚಂದ್ರನನ್ನು ವಿರೋಧಿಸುವುದಿಲ್ಲ. ಹೀಗಾಗಿ, ಜನವರಿ 22ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾವು ಶ್ರೀರಾಮಚಂದ್ರನನ್ನು ವಿರೋಧಿಸುವುದಿಲ್ಲ. ಬದಲಾಗಿ ಅಯೋಧ್ಯೆ ಹಾಗೂ ರಾಮಮಂದಿರವನ್ನು ಬಿಜೆಪಿ ರಾಜಕೀಯವಾಗಿ

ಬಳಸಿಕೊಳ್ಳುತ್ತಿರುವುದನ್ನು ನಾವು ವಿರೋಧಿಸುತ್ತೇವೆ ಎಂದರು.


ಇಡೀ ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ಕೂಡ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡುತ್ತಾರೆ. ದೇವರನ್ನು ಬಳಸಿ ಬಿಜೆಪಿ ಮಾಡುತ್ತಿರುವ ರಾಜಕೀಯವನ್ನು

ನಾವು ವಿರೋಧಿಸುತ್ತೇವೆ ಎಂದರು.
ಜನವರಿ 22ರ ನಂತರ ನಾವು ಅಯೋಧ್ಯೆಗೆ ತೆರಳಿ ಪೂಜೆ ಸಲ್ಲಿಸುತ್ತೇವೆ ಎಂದರು.

By admin

ನಿಮ್ಮದೊಂದು ಉತ್ತರ

error: Content is protected !!