ರಸ್ತೆ ಸುರಕ್ಷತಾ ನಿಯಮಗಳ ಪಾಲನೆ ಮಾಡದಿರುವುದು ಅಪಘಾತ ಸಂಖ್ಯೆ ಹೆಚ್ಚಲು ಪ್ರಮುಖ ಕಾರಣ. ಪ್ರತಿಯೊಬ್ಬ ವಾಹನ ಬಳಕೆದಾರರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳ ಪಾಲಿಸಬೇಕು ಎಂದು ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್. ರಾಜಶೇಖರ್ ಹೇಳಿದರು.
ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವತಿಯಿಂದ ಸುಬ್ಬಯ್ಯ ದಂತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ “ಅಪಘಾತ ಜಾಗೃತಿ ಅಭಿ ಯಾನ” ಕಾರ್ಯಕ್ರಮದಲ್ಲಿ ಮಾತನಾಡಿದರು.
ವಾಹನ ಚಾಲನಾ ಪರವಾನಗಿ ಹೊಂದು ವುದು ಮೊದಲ ಕರ್ತವ್ಯ. ಬೈಕ್ ಓಡಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಕಾರು ಚಲಾಯಿಸುವಾಗ ಸೀಟ್ ಬೆಲ್ಟ್ ಧರಿಸಬೇಕು. ನಿಯಮಾನುಸಾರ ವೇಗದಲ್ಲಿ ವಾಹನ ಓಡಿಸ ಬೇಕು. ಎಲ್ಲ ರಸ್ತೆ ಸುರಕ್ಷತಾ ನಿಯಮಗಳು ಪಾಲಿ ಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
ದೇಶಿಯ ವಿದ್ಯಾಶಾಲಾ ಸಮಿತಿ ಸಹ ಕಾರ್ಯದರ್ಶಿ ಡಾ. ಸತೀಶ್ ಕುಮಾರ್ ಶೆಟ್ಟಿ ಮಾತನಾಡಿ, ಮಕ್ಕಳು ಜವಾಬ್ದಾರಿಯುತವಾಗಿ ಜೀವನ ನಡೆಸಬೇಕು ಎನ್ನುವುದು ಪಾಲಕರ ಕನಸು. ಆದರೆ ಯುವಜನರು ನಿರ್ಲಕ್ಷ್ಯ ವಹಿಸಿ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಜೀವವನ್ನೇ ಕಳೆದುಕೊಳ್ಳುತ್ತಾರೆ. ಇದರಿಂದ ಪಾಲಕರು ತುಂಬಾ ನೋವು ಅನುಭವಿಸುತ್ತಾರೆ. ಯುವಜನರು ಜಾಗೃತಿ ವಹಿಸಿ ವಾಹನ ಚಲಾಯಿಸಬೇಕು ಎಂದು ಸಲಹೆ ನೀಡಿದರು.
ಸುಬ್ಬಯ್ಯ ದಂತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯ ಡಾ. ಪ್ರಮೋದಕೃಷ್ಣ.ಬಿ ಅವರು ರಸ್ತೆ ಅಪಘಾತ, ಪರಿಣಾಮಗಳು ಮತ್ತು ಎಚ್ಚರಿಕೆ ವಹಿಸಬೇಕಾದ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು. ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಸ್ವಾಗತ ಭಾಷಣ ಮಾಡಿದರು. ದೇಶಿಯ ವಿದ್ಯಾಶಾಲಾ ಸಮಿತಿಯ ಐಕ್ಯೂಎಸಿ ಸಂಚಾಲಕ ಎನ್.ಕುಮಾ ರಸ್ವಾಮಿ, ಕೇತನಾ ಆರ್ತಿ, ವಾಣಿಜ್ಯ ವಿಭಾಗದ ಮುಖ್ಯಸ್ಥ ರುದ್ರೇಶ್.ಸಿ.ಇ ಮತ್ತಿತರರಿದ್ದರು.