ಶಿವಮೊಗ್ಗ, ಫೆ.03:
ಕುವೆಂಪು ವಿಶ್ವ ವಿದ್ಯಾಲಯದ ಶೈಕ್ಷಣಿಕ ಅವಧಿಯನ್ನು ಮುಂದೂಡಿದ್ದು ಇದು ಎನ್ ಎಸ್ ಯು ಐ ಹೋರಾಟದ ಫಲ ಎಂದು ಮುಖಂಡ ಮಧುಸೂದನ್ ತಿಳಿಸಿದ್ದಾರೆ.


ಕುವೆಂಪು ವಿಶ್ವ ವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆಯಿಂದಾಗಿ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳು ಸರಿಯಾಗಿ ನಡೆದಿರುವುದಿಲ್ಲ.
ಆದ್ದರಿಂದ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳು ನಡೆಯದೇ ಇರುವುದನ್ನು ಗಮನದಲ್ಲಿಟ್ಟುಕೊಂಡು ಅಕಾಡೆಮಿಕ್ ಕ್ಯಾಲೆಂಡರ್ ಅನ್ನು ಫೆಬ್ರವರಿ ತಿಂಗಳ ಅಂತಿಮ ದಿನದವರೆಗೆ ಮಾರ್ಪಡಿಸಬೇಕು ಹಾಗೂ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಪರೀಕ್ಷೆಯನ್ನು ಮುಂದೂಡಬೇಕೆಂದು ಎನ್ ಎಸ್ ಯು ಐ ವತಿಇಂದ ಪ್ರತಿಭಟಿಸಿ ಮನವಿ ಸಲ್ಲಿಸಲಾಗಿತ್ತು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆಗಿನ ಸಂದರ್ಭದಲ್ಲಿ ಯುವ ಮುಖಂಡರಾದ ಮುರಗೇಶ, ಮಧು, ಕಾಶಿ ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮನವಿಗೆ ವಿಶ್ವ ವಿದ್ಯಾಲಯ ಸ್ಪಂದಿಸಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಅಕಾಡೆಮಿಕ್ ಕ್ಯಾಲೆಂಡರ್ ಹಾಗೂ ಪರೀಕ್ಷೆ ಎರಡನ್ನೂ ಮುಂದೂಡಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದೆ ಎಂದಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!