ಬೆಂಗಳೂರು,ಫೆ.16: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ.
ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ.
ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಆಗಿದ್ದು, 14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್​ ಪ್ರತಿಗಳನ್ನು ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆಯ ಬ್ಯಾಗ್​ನಲ್ಲಿ ಸಿಎಂ ತೆಗೆದುಕೊಂಡು ಬಂದು, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ ಫೋನ್‌ ನೀಡುವುದಾಗಿ ಘೋಷಿಸಿರುವ‌ ಸಿಎಂ
20 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು.


ಶಿವಮೊಗ್ಗ ಸೇರಿದಂತೆ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್
ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್​ ನಿರ್ಮಾಣ ಮಾಡಲಾಗುವುದು. ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ, ಬೆಂಗಳೂರು ಗ್ರಾ. ಜಿಲ್ಲೆ ಮೂಗೆನಹಳ್ಳಿ ಬಳಿ ಆಹಾರ ಪಾರ್ಕ್​ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ.
ಮೀನುಗಾರರ ಮೇಲೆ ವಿಶೇಷ ಕಾಳಜಿ ವಹಿಸಿರುವ ರಾಜ್ಯ ಕಾಂಗ್ರೆಸ್​ಸರ್ಕಾರ, ಮೀನುಗಾರರ ರಕ್ಷಣೆಗೆಂದೇ ಸಮುದ್ರ ಆಂಬ್ಯುಲೆನ್ಸ್​ ಯೋಜನೆಯನ್ನು ಬಜೆಟ್​ ಮಂಡನೆ ವೇಳೆ ಘೋಷಿಸಿದೆ.


ಹಿರಿಯರಿಗೆ ‘ಅನ್ನ ಸುವಿಧಾ’
ಈ ಹೊಸ ಯೋಜನೆಯಡಿಯಲ್ಲಿ ಹೋಮ್ ಡೆಲವರಿ ಆಪ್ ರಚಿಸಿ 80 ವರ್ಷ ದಾಟಿದ ಹಿರಿಯ ನಾಗರಿಕರು ಇರುವ ಮನೆಗೆ ಈ ಯೋಜನೆಯ ಸೇವೆ ನೀಡಲಾಗುವುದು ಎಂದು ತಿಳಿಸಿದರು.
ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.
ಮದ್ಯದ ಬೆಲೆ ಏರಿಸಲು ರಾಜ್ಯ ಸರ್ಕಾರ ನಿರ್ಧಾರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್​ ಮಂಡನೆ ಮಾಡುತ್ತಿದ್ದು, ಮದ್ಯ ಪ್ರಿಯರಿಗೆ ಶಾಕ್​ ನೀಡಿದ್ದಾರೆ. ಹೌದು ಮದ್ಯದ ದರ ಮತ್ತೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಬೆಂಗಳೂರು (ಫೆ.16): ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸಲು ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.


ಕರ್ನಾಟಕ ಬಜೆಟ್ 2024ರ ಬಜೆಟ್ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಭರಪೂರ ಕೊಡುಗೆಯನ್ನು ನೀಡಿದ್ದಾರೆ. ವಿವಿಧ ಕೃಷಿ ಯೋಜನೆಗಳನ್ನು ಒಗ್ಗೂಡಿಸಿ ಅವುಗಳನ್ನು ಸಮರ್ಪಕವಾಗಿ ಜಾರಿಗೊಳಿಸಿವ ನಿಟ್ಟಿನಲ್ಲಿ ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ (Karnataka Raitha Samriddhi Yojana) ರೈತರಿಗೆ ಕೆಳಕಂಡ ವಿಷಯಗಳಲ್ಲಿ ಮಾರ್ಗದರ್ಶನ ಹಾಗೂ ಬೆಂಬಲ ನೀಡಲು ಕ್ರಮ ಕೈಗೊಳ್ಳಲಾಗಿದೆ.

By admin

ನಿಮ್ಮದೊಂದು ಉತ್ತರ

error: Content is protected !!