ಶಿವಮೊಗ್ಗ :

ತಮ್ಮ ಅಗತ್ಯ ಕೆಲಸ-ಕಾರ್ಯಗಳ ನಿಮಿತ್ತ ಹಾಗೂ ಸೌಲಭ್ಯವನ್ನು ನಿರೀಕ್ಷಿಸಿ ಕಚೇರಿಗೆ ಬರುವ ಗ್ರಾಮೀಣರಿಗೆ, ಜನಸಾಮಾನ್ಯರಿಗೆ, ಅದರಲ್ಲೂ ವಿಶೇಷವಾಗಿ ಜನಸಾಮಾನ್ಯರಿಗೆ ವಿಳಂಬಕ್ಕೆ ಅವಕಾಶವಿಲ್ಲದಂತೆ ತಮ್ಮ ಕಾರ್ಯವ್ಯಾಪ್ತಿಯಲ್ಲಿನ ಕೆಲಸಗಳನ್ನು ತುರ್ತಾಗಿ ಮಾಡಿಕೊಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ಭದ್ರಾವತಿ ತಾಲೂಕು ಕಚೇರಿಗೆ ಭೇಟಿ ಮಾಡಿ, ಕಚೇರಿಗೆ ಬಂದಿದ್ದ ಜನಸಾಮಾನ್ಯರೊಂದಿಗೆ ಇಲಾಖಾ ಸೇವೆಗಳ ಬಗ್ಗೆ ಮಾಹಿತಿ ಪಡೆದು, ನಂತರ ಆಯೋಜಿಸಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳಲ್ಲಿ ಅನುಷ್ಠಾನದಲ್ಲಿರುವ ಯೋಜನೆಗಳನ್ನು ಪ್ರಾಮಾಣಿಕವಾಗಿ ಅರ್ಹರನ್ನು ಗುರುತಿಸಿ ತಲುಪಿಸಬೇಕು. ಕಚೇರಿಗೆ ಬರುವ ಜನಸಾಮಾನ್ಯರಿಗೆ ಅನವಶ್ಯಕವಾಗಿ ಕಚೇರಿಗೆ ಅಲೆದಾಡದಂತೆ ಸರಿಯಾದ ಮಾರ್ಗದರ್ಶನ ನೀಡಿ, ಅವರು ನೀಡುವ ಅರ್ಜಿಗಳನ್ನು ಸಣ್ಣ ಕಾರಣಗಳಿಗಾಗಿ ಹಿಂದಕ್ಕೆ ಕಳುಹಿಸದೇ ಸಹಕರಿಸುವಂತೆ ಹಾಗೂ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡುವಂತೆ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.
ಅಧಿಕಾರಿಗಳು ತಮ್ಮ ಕಚೇರಿಗೆ ಬರುವ ಜನಸಾಮಾನ್ಯರೊಂದಿಗೆ ಸೌಜನ್ಯುಯುತವಾಗಿ ವರ್ತಿಸುವಂತೆ ಹಾಗೂ ಜನಸ್ನೇಹಿ ಆಡಳಿತ ನೀಡುವಂತೆ ಸೂಚಿಸಿದ ಅವರು, ಸರ್ಕಾರದ ಸೌಲತ್ತುಗಳನ್ನು ಅರ್ಹರಿಗೆ ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ತಲುಪಿಸುವಂತೆ ಅವರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!