ಸೊರಬ: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರಂತೆ ಸದಾ ಬಡವರ ಪರ ಕಾಳಜಿ ಹೊಂದುವ ಮೂಲಕ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಅವರು ಜನ ನಾಯಕರಾಗಿ ರಾಜ್ಯದಲ್ಲಿಯೇ ಲಕ್ಷಾಂತರ ಜನ ಅಭಿಮಾನಿ ಬಳಗ ಹೊಂದಿದ್ದಾರೆ ಎಂದು ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಕೆ.ಪಿ. ಪ್ರವೀಣ್ ಕುಮಾರ್ ಹೇಳಿದರು.

ಪಟ್ಟಣದ ಹೊಸಪೇಟೆ ಬಡಾವಣೆಯ ನವಚೇತನ ಬುದ್ದಿಮಾಂಧ್ಯ ಮಕ್ಕಳ ವಸತಿಯುತ ಶಾಲೆಯಲ್ಲಿ ಬ್ಲಾಕ್ ಯುವ ಕಾಂಗ್ರೆಸ್ ಹಾಗೂ ಮಧು ಬಂಗಾರಪ್ಪ ಅಭಿಮಾನಿ ಬಳಗದಿಂದ ಸಚಿವ ಎಸ್. ಮಧು ಬಂಗಾರಪ್ಪ ಜನ್ಮ ದಿನದ ಅಂಗವಾಗಿ ಶನಿವಾರ ಬುದ್ದಿಮಾಂಧ್ಯ ಮಕ್ಕಳಿಗೆ ಹಣ್ಣು-ಸಿಹಿ ವಿತರಿಸಿ ಅವರು ಮಾತನಾಡಿದರು.


ಕ್ಷೇತ್ರದ ಶಾಸಕರು ಸಹ ಆಗಿರುವ ಮಧು ಬಂಗಾರಪ್ಪ ಅವರು ಕ್ಷೇತ್ರದ ಜನತೆಯ ಆರೋಗ್ಯದ ದೃಷ್ಠಿಯಿಂದ ಬೃಹತ್ ಆರೋಗ್ಯ ಶಿಬಿರ ನಡೆಸಿ ಸಾವಿರಾರು ಜನರಿಗೆ ಹೊಸ ಬದುಕು ಕಟ್ಟಿಕೊಳ್ಳಲು ನೆರವಾದರು. ರೈತರ ಪರ ಹೋರಾಟ ಮಾಡಿ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ನಾಂದಿ ಹಾಡಿದ್ದಾರೆ. ಪ್ರಸ್ತುತ ಶಿಕ್ಷಣ ಕ್ಷೇತ್ರದ ಮಹತ್ತರ ಬದಲಾವಣೆಗಳನ್ನು ತರುವ ಮೂಲಕ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ

ಅನುಕೂಲ ಮಾಡಿಕೊಟ್ಟಿದ್ದಲ್ಲದೇ ಸರ್ಕಾರಿ ಶಾಲೆಗಳ ಉಳಿವಿಗಾಗಿ ಪಣ ತೊಟ್ಟಿದ್ದಾರೆ. ಜೊತೆಗೆ, ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ ಹೊಂದಿದ ಇವರು ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ತಂದು ಯಾವ ಮಕ್ಕಳು ಸಹ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿದಂತೆ ಕ್ರಮ ಕೈಗೊಂಡಿದ್ದಾರೆ ಎಂದರು.


ತಾಪಂ ಮಾಜಿ ಸದಸ್ಯ ಸುರೇಶ್ ಬಿಳವಾಣಿ ಮಾತನಾಡಿ, ಮಧು ಬಂಗಾರಪ್ಪ ಅವರು ತಂದೆ ಎಸ್. ಬಂಗಾರಪ್ಪ ಅವರ ಹಾದಿಯಲ್ಲಿ ಮುನ್ನೆಡೆಯುತ್ತಿದ್ದಾರೆ. ಅವರ ಮುಂದಿನ ಭವಿಷ್ಯದ ರಾಜಕಾರಣದಲ್ಲಿ ಮತ್ತಷ್ಟು ಉನ್ನತ ಹುದ್ದೆಗಳನ್ನು ಅಲಂಕರಿಸುವಂತಾಗಲಿ ಎಂದು ಶುಭ ಹಾರೈಸಿದರು.


ನಂತರ ಸಾರ್ವಜನಿಕ ಆಸ್ಪತ್ರೆಯಲ್ಲಿ ಮತ್ತು ಶ್ರೀ ಸಾಯಿ ವೃದ್ಧಾಶ್ರಮದಲ್ಲಿ ಹಣ್ಣು-ಹಂಪಲು ಮತ್ತು ಸಿಹಿ ವಿತರಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಜಾತ ಜೋತಾಡಿ, ಪುರಸಭೆ ಸದಸ್ಯೆ ಆಫ್ರೀನಾ ಮೆಹಬೂಬ್ ಬಾಷಾ, ತಾಪಂ ಮಾಜಿ ಸದಸ್ಯೆ ಜ್ಯೋತಿ ನಾರಾಯಣಪ್ಪ, ಪಪಂ ಮಾಜಿ ಉಪಾಧ್ಯಕ್ಷೆ ರತ್ನಮ್ಮ ನಾಗಪ್ಪ, ಪ್ರಮುಖರಾದ ಯಶೊಧ, ಪ್ರಮೋದ್ ಶಾಂತಪ್ಪ, ಸಂಜಯ

ದೇವತಿಕೊಪ್ಪ, ರವಿ ಕೇಸರಿ, ಪಾಂಡು ಕೊಡಕಣಿ, ರಾಘು, ಶಿವು ಮೈಸಾವಿ, ಸಚಿನ್ ಗೌಡ, ಸಿದ್ದೇಶ್, ಯಶೋಧರ, ಶಶಿಧರ, ಮಾಲತೇಶ ಹೆಗ್ಗೋಡ, ಸುನೀಲ್ ಮಠದ್, ಶಿವ ಕುಮಾರ್, ಸುಚಿನ್, ನಂಜುಂಡ ಕಲ್ಲಂಬಿ, ಸೇರಿದಂತೆ ಇತರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!