ಶಿವಮೊಗ್ಗ,ಮಾ.೪: ಮಲೆನಾಡು ರೈತರ ಸಮಸ್ಯೆಗಳನ್ನು ಬಗೆಹರಿಸಲು ತಕ್ಷಣವೇ ಸಭೆ ಕರೆಯಬೇಕು ಎಂದು ಮಲೆನಾಡು ರೈತರ ಹೋರಾಟ ಸಮಿತಿಯ ಸಂಚಾಲಕ ತಿ.ನಾ.ಶ್ರೀನಿವಾಸ್ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪನವರಿಗೆ ಆಗ್ರಹಿಸಿದ್ದಾರೆ.
ಶರಾವತಿ ಮುಳುಗಡೆ ಸಂತ್ರಸ್ಥರಿಗೆ ೬೪ ವರ್ಷವಾದರೂ ಹಕ್ಕುಪತ್ರ ಕೊಟ್ಟಿಲ್ಲ. ಮುಳುಗಡೆ ಸಂತ್ರಸ್ಥರ ಬೇಡಿಕೆಗಳು ಈಡೇರಿಲ್ಲ. ಅರಣ್ಯ ಭೂಮಿ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಒಕ್ಕಲೆಬ್ಬಿಸಬಾರದು ಎಂಬ
ಸರ್ಕಾರದ ಆದೇಶವಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳ ಕಿರುಕುಳ ಹೆಚ್ಚಾಗುತ್ತಿದೆ. ರೈತರು ಬೆಳೆದ ತೋಟಗಳನ್ನೇ ನಾಶ ಮಾಡಲಾಗುತ್ತಿದೆ. ರೈತರ ಸುಮಾರು ೮೦ ಸಾವಿರ ಅರ್ಜಿಗಳನ್ನು ವಜಾ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ರೈತರಿಗೆ ನ್ಯಾಯ ನೀಡಲು ತಕ್ಷಣವೇ ಸಭೆ ಕರೆದು ಚರ್ಚಿಸಿ ರೈತರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.