ಮನವಿ ಶಿವಮೊಗ್ಗ, ಮಾ.೦೮:
ನಗರದಲ್ಲಿ ಮಾರಿಕಾಂಬ ಜಾತ್ರೆ ಅವಧಿಯಲ್ಲಿ ಸಮರ್ಪಕ ನೀರಿ, ಸ್ವಚ್ಛತೆ ಸೇರಿ ಅಗತ್ಯ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಮಹಾನಗರ ಪಾಲಿಕೆ ಮಾಜಿ ಸದಸ್ಯರು ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
ನಗರದಲ್ಲಿ ಇದೇ ಮಾ. ೧೨ರಿಂದ ೧೬ ರವರೆಗೆ ಗ್ರಾಮ ದೇವತೆ ಶ್ರೀ ಕೋಟೆ ಮಾರಿಕಾಂಬ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗುತ್ತದೆ. ಸಾರ್ವ ಜನಿಕರು ಬಹಳ ಉತ್ಸಾಹದಿಂದ ಜಾತ್ರಾ ಮಹೋತ್ಸವವನ್ನು ಆಚರಿಸುವುದರಿಂದ ಬೇರೆ ಬೇರೆ ಊರುಗಳಿಂದ ನೆಂಟರಿಷ್ಟರು, ಬಂಧು ಮಿತ್ರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಜಾತ್ರೆಯನ್ನು ಬಹಳ ಉತ್ಸಾಹ ದಿಂದ ಆಚರಿಸುತ್ತಾರೆ. ನಗರದಲ್ಲಿ
ಪ್ರಮುಖವಾಗಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತೆಯ ಬಗ್ಗೆ ಗಮನಹರಿಸುವಂತೆ ಬೇಕಾದ ಸೂಕ್ತ ವ್ಯವಸ್ಥೆಗಳನ್ನು ಮಾಡಿ ಕೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಲಾಗಿದೆ.
ಆಯುಕ್ತರ ಸಮ್ಮುಖದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಸಿ ೩೫ ವಾರ್ಡ್ ಗಳಿಗೂ ನೀರಿನ ಟ್ಯಾಂಕರ್ ವ್ಯವಸ್ಥೆಯನ್ನು ಹಾಗೂ ದಿನಕ್ಕೆ ಎರಡು ಮೂರು ಬಾರಿ
ದೇವಸ್ಥಾನದ ಸುತ್ತಮುತ್ತಲು ಸ್ವಚ್ಛತಾ ಕಾರ್ಯ ಕೈಗೊಳ್ಳು ವಂತೆ ಮುಂದಿನ ದಿನಗಳಲ್ಲಿ ನೀರಿನ ಕೊರತೆ ಬಾರದಂತೆ ಈಗಿನಿಂದಲೇ ಮುಂಜಾಗ್ರತೆ ಯನ್ನು ವಹಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಶಿವಮೊಗ್ಗ ನಗರದ ಪ್ರತಿಯೊಬ್ಬರು ಹಬ್ಬದ
ಸಂಭ್ರಮದಲ್ಲಿ ಪಾಲ್ಗೊಳ್ಳುವುದರಿಂದ ಸ್ವಚ್ಛತೆಯ ಹಾಗೂ ನೀರಿನ ವ್ಯವಸ್ಥೆಗೆ ಬೇಕಾದ ಕೆಲಸದವರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡರು,
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಹೆಚ್.ಸಿ. ಯೋಗೇಶ್, ಮಾಜಿ ಮೇಯರ್ ನಾಗರಾಜ್ ಕಂಕಾರಿ, ಮಾಜಿ ವಿರೋಧ ಪಕ್ಷದ ನಾಯಕರಾದ ರೇಖಾ ರಂಗನಾಥ್, ಮೇಹಕ್ ಶರೀಫ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಶಿವಕು ಮಾರ್ , ಕೆ ರಂಗನಾಥ್, ರಂಗೇಗೌಡ , ಮಧುಸೂದನ್ ಉಪಸ್ಥಿತರಿದ್ದರು.