ಶಿವಮೊಗ್ಗ, ಮಾ.16
ಲೋಕಸಭಾ ಚುನಾವಣೆ 2024 ಕ್ಕೆ ದಿನಾಂಕ ಘೋಷಣೆಯಾಗಿದೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.


ರಾಜ್ಯದಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದ ಮತದಾನ ನಡೆಯಲಿದೆ. ಎರಡನೇ ಹಂತದ ವೋಟಿಂಗ್ ಮೇ 7ರಂದು ಮತದಾನ ನಡೆಯಲಿದೆ. ಜೂನ್‌ 4ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.


ರಾಜ್ಯದಲ್ಲಿ ಮೊದಲ ಹಂತ ಅಂದರೆ ಏಪ್ರಿಲ್ 26 ರಂದು ನಡೆಯಲಿರುವ ಮತದಾನವೂ ಉಡುಪಿ- ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ , ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕ

ಬುಳ್ಳಾಪುರ, ಕೋಲಾರ ಗಳಲ್ಲಿ ನಡೆಯಲಿದೆ.


ರಾಜ್ಯದಲ್ಲಿ ಎರಡನೇ ಹಂತ ಅಂದರೆ ಮೇ ಎಳರಂದು ನಡೆಯಲಿರುವ ಚುನಾವಣೆಯು ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಕಲಬುರಗಿ, ರಾಯಚೂರು , ಬೀದರ್, ಕೊಪ್ಪಳ, ಬಳ್ಳಾರಿ , ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗದಲ್ಲಿ ನಡೆಯಲಿದೆ.

By admin

ನಿಮ್ಮದೊಂದು ಉತ್ತರ

error: Content is protected !!