ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ತೊರೆಬೈಲು ಗ್ರಾಮದ ಸಂಪಗಾರಿನ ವ್ಯಕ್ತಿಯೊಬ್ಬರು ಗಾಳಿ ಮಳೆಯಿಂದ ಮರ ಬಿದ್ದು ಮೃತಪಟ್ಟಿದ್ದಾರೆ.

ಜಯಂತ್ ಭಟ್ (64 ) ಕೋಣಂದೂರಿನಿಂದ ಮನೆಗೆ ಹೋಗುವಾಗ ಭಾರಿ ಗಾಳಿ ಮಳೆಗೆ ಅಕೇಶಿಯಾ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಕೋಣಂದೂರು ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮರ ಬಿದ್ದು ಆಗುಂಬೆ ಘಾಟಿ ಟ್ರಾಫಿಕ್ ಜಾಮ್!

ಆಗುಂಬೆ ಘಾಟಿಯಲ್ಲಿ ಮರ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತು. ಘಾಟಿಯ ಮೂರನೆ ತಿರುವಿನಲ್ಲಿ ಮರ ಬುಡ ಮೇಲಾಗಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ವಿಷಯ ತಿಳಿದು ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!