ಇದನ್ನೂ ನೋಡಿ.., https://youtu.be/7VV0cYA0RJg
ಉಡುಪಿ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಜಿಲ್ಲೆಯ ಬ್ರಹ್ಮಾವರದ “ಹೋಟೆಲ್ ಆಶ್ರಯ”ದಲ್ಲಿ ಆಯೋಜಿಸಿದ್ದ “ಎನ್.ಪಿ.ಎಸ್ ನೌಕರರ ಸಭೆ”ಯಲ್ಲಿ ಪಾಲ್ಗೊಂಡು ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಜೊತೆಯಲ್ಲಿ ಮಹತ್ವದ ವಿಚಾರಗಳನ್ನು ಚರ್ಚಿಸಲಾಯಿತು.
ರಾಜ್ಯ ಸರ್ಕಾರ ಹಳೇ ಪಿಂಚಣಿ ವ್ಯವಸ್ಥೆ ಮರುಜಾರಿಗೆ ನಿರ್ಧರಿಸಿರುವ ಸಂದರ್ಭದಲ್ಲಿ ಈ ಚರ್ಚೆ ಮಹತ್ವದ್ದಾಗಿದೆ.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್, ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್, ಪಿಂಚಣಿ ವಂಚಿತ ಅನುದಾನಿತ ಶಿಕ್ಷಕರ ಸಂಘದ ಅಧ್ಯಕ್ಷ ಹನುಮಂತಪ್ಪ, ಪ್ರಸಾದ್ ಕಾಂಚನ್, ಕಿಶನ್ ಹೆಗ್ಡೆ, ಕಾರ್ಕಳದ ಉದಯ್ ಶೆಟ್ಟಿ ಮುನಿಯಾಲ್ ಸೇರಿದಂತೆ ಅನೇಕ ಮುಖಂಡರು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.