ಶಿವಮೊಗ್ಗ,ಜ.14:
ಸಂಕ್ರಾಂತಿ ಎಂಬುದು ಕತ್ತಲಿನಿಂದ ಬೆಳಕಿನೆಡೆಗೆ ಹೋಗುವ ಪರ್ವ ಕಾಲವಾಗಿದ್ದು, ಶಿವಯೋಗಿ ಸಿದ್ಧರಾಮೇಶ್ವರರ ವಚನಗಳನ್ನು ತಿಳಿದುಕೊಂಡು ಅವರು ತೋರಿದ ಹಾದಿಯಲ್ಲಿ ಅವರನ್ನು ಆದರ್ಶವಾಗಿಟ್ಟುಕೊಂಡು ನಡೆದಾಗ ನಾವೆಲ್ಲರೂ ಕತ್ತಲೆಯಿಂದ ಬೆಳಕಿನೆಡೆಗೆ ಸಾಗಬಹುದೆಂದು ಅಪರ ಜಿಲ್ಲಾಧಿಕಾರಿ ಅನುರಾದ ಹೇಳಿದ್ದಾರೆ.


ಅವರು ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಇದರ ವತಿಯಿಂದ ಹಮ್ಮಿಕೊಂಡಿದ್ದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.
ಹಿಂದಿನಿಂದಲೂ ನಮ್ಮ ನಾಡಿನ ಖ್ಯಾತ ವಚನಕಾರರು ತಮ್ಮ ವಚನಗಳ ಮೂಲಕ, ನಡೆ-ನುಡಿಗಳ ಮೂಲಕ ಸಮಾಜದ ಅಂಕು-ಡೊಂಕುಗಳನ್ನು ಸರಿಪಡಿಸುವ ಕಾರ್ಯ ಮಾಡಿದ್ದಾರೆ. ಬಸವಣ್ಣನವರ ತತ್ವ-ಸಿದ್ಧಾಂತಗಳು ಮತ್ತು ಶಿವಯೋಗಿ ಸಿದ್ಧರಾಮೇಶ್ವರರ ವಚನಗಳು, ಸಾಮಾಜಿಕ ಸಮತೋಲನ ಕಾಪಾಡುವಲ್ಲಿ ಮತ್ತು ಜನರಲ್ಲಿ ಅರಿವು ಮೂಡಿಸಲು ಸಹಕಾರಿಯಾಗಿತ್ತು. ಕರೋನದಂತಹ ಮಹಾ ಮಾರಿಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲಾ ಮಹತ್ಮರ ಜಯಂತಿಗಳನ್ನು ಸರಳವಾಗಿ ಆಚರಿಸಲು ಆದೇಶ ಮಾಡಿರುವುದರಿಂದ ಸಾಂಕೇತಿಕವಾಗಿ ಆಚರಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ನಾಡಿನ ಸಮಸ್ತ ಜನತೆಗೆ ಮಹಾತ್ಮರ ಕೃಪೆಯಿಂದ ಎಲ್ಲಾ ಸಂಕಷ್ಟಗಳು ದೂರವಾಗಿ ನೆಮ್ಮದಿ ಸಿಗಲಿ ಎಂದು ಹಾರೈಸಿದರು.
ಸಂಕ್ರಾಂತಿಯ ಶುಭದಿನದಂದೆ ಸಿದ್ಧರಾಮೇಶ್ವರ ಜಯಂತಿ ಬಂದಿರುವುದು ಒಂದು ಸುಸಂದರ್ಭ. ಅವರ ಆದರ್ಶಗಳನ್ನು ಪಾಲಿಸಿ ಮುನ್ನೆಡೆಯೋಣ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರಾದ ವೀರಭದ್ರಪ್ಪ ಪೂಜಾರ್, ಭೋವಿ ಸಮಾಜದ ಅಧ್ಯಕ್ಷರಾದ ರವಿ ಕುಮಾರ್, ರಾಮಕೃಷ್ಣ, ಹೆಚ್. ಗಣೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್, ಹಾಗೂ ಭೋವಿ ಸಮಾಜದ ಪ್ರಮುಖರು ಉಪಸ್ಥಿತರಿದ್ದರು

By admin

ನಿಮ್ಮದೊಂದು ಉತ್ತರ

error: Content is protected !!