ಶಿವಮೊಗ್ಗ : ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಶೀನಪ್ಪ ಶೆಟ್ಟಿ
ವೃತ್ತದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.
ಯುವ ಮೋರ್ಚಾ ವತಿಯಿಂದ ಕಾರು ಎಳೆದು ತಂದು ಪ್ರತಿಭಟನಾ ಸ್ಥಳಕ್ಕೆ ಬಂದು ಸೇರಿದರೆ, ಮಹಿಳಾ ಮೋರ್ಚಾದಿಂದ ಮಹಿಳಾ ಸಂತೆ ನಡೆಸುವ ಮೂಲಕ ವಿನೂತನ ಫ್ರತಿಭಟನೆ ನಡೆಸಲಾಯಿತು.
ರೈತ ಮೋರ್ಚಾ ವತಿಯಿಂದ ಎತ್ತಿನ ಗಾಡಿಗಳನ್ನು ಹೊಡೆದುಕೊಂಡು ಬಂದು ಆಕ್ರೋಶ
ವ್ಯಕ್ತಪಡಿಸಲಾಯಿತು. ಓಬಿಸಿ ಮೋರ್ಚಾದಿಂದ ದ್ವಿಚಕ್ರ ವಾಹನಗಳನ್ನು ತಳ್ಳಿಕೊಂಡು ಬಂದು ಬೆಲೆ ಏರಿಕೆಗೆ
ಪ್ರತಿರೋಧ ವ್ಯಕ್ತಪಡಿಸಲಾಯಿತು. ನಗರ ಬಿಜೆಪಿ ಘಟಕದಿಂದ ತಮಟೆ ಬಾರಿಸುವ ಮೂಲಕ
ಪ್ರತಿಭಟನೆ ನಡೆಸಲಾಗುತ್ತದೆ. ಎಲ್ಲಾ ವಿಭಾಗಗಳು ನಗರದ ಬೇರೆ ಬೇರೆ ಕಡೆಗಳಿಂದ ಪ್ರತಿಭಟನಾ ಮೆರವಣಿಗೆ ನಡೆಸಿಕೊಂಡು ಒಂದೆಡೆ ಸಮಾವಶಗೊಂಡು ಸರ್ಕಾರದ ಕ್ರಮ ಖಂಡಿಸಲಾಯಿತು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಎಸ್.ರುದ್ರೇಗೌಡ, ಡಿ.ಎಸ್. ಅರುಣ್, ಭಾರತಿಶೆಟ್ಟಿ, ಮಾಜಿ ಶಾಸಕರಾದ
ಎಂ.ಬಿ. ಭಾನುಪ್ರಕಾಶ್, ಮುಖಂಡರಾದ ಎಂ.ಬಿ. ಹರಿಕೃಷ್ಣಘಿ, ಶಿವರಾಜ್, ಎಸ್. ದತ್ತಾತ್ರಿ, ಪ್ರಶಾಂತ್ ಕುಕ್ಕೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಗಾಯತ್ರಿ
ಮಲ್ಲಪ್ಪ, ರೈತಮೋರ್ಚಾ ಅಧ್ಯಕ್ಷ ಸಿದ್ದಲಿಂಗಪ್ಪ, ನಗರಾಧ್ಯಕ್ಷ ಮೋಹನ ರೆಡ್ಡಿ ಮೊದಲಾದವರು ಇದ್ದರು.