ಶಿವಮೊಗ್ಗ, ಜೂ.೨೮: ಇಲ್ಲಿನ ಪ್ರತಿಷ್ಠಿತ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಇಂದು ನಡೆಯಿತು.
ಮತದಾನ ನಡೆಯುವ ಸುತ್ತಮುತ್ತ ಬಿಗಿ ಭದ್ರತೆಯನ್ನು ಆಯೋಜಿಸಲಾಗಿತ್ತು. ಹಿಂದೆಂದೂ ಕಾಣದ ರೀತಿಯಲ್ಲಿ ಮತದಾರರು ಮತ್ತು ಸಾರ್ವಜನಿಕರು ಚುನಾವಣೆಗೆ ಸ್ಪರ್ಧಿಸಿದ್ದ ಅವರ ಅಭಿಮಾನಿಗಳು ಡಿಸಿಸಿ ಬ್ಯಾಂಕಿನ ಸುತ್ತಮುತ್ತ ಸೇರಿದ್ದು, ತಮ್ಮ ತಮ್ಮ ಅಭ್ಯರ್ಥಿಗಳ ಬಗ್ಗೆ ಕೊನೆಯ ಬಾರಿಗೆ ಮತಯಾಚನೆ ಮಾಡುತ್ತಿದ್ದು, ಕಂಡು ಬಂದಿತ್ತು. ಮತದಾನ ಮಾಡಲು ಹೋಗುವವರಿಗೆ ಮೊಬೈಲ್‌ನ್ನು ತೆಗೆದುಕೊಂಡು ಹೋಗಲು ಬಿಡಲಿಲ್ಲ.


ಮತದಾನದ ಬಳಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಬೇಳೂರು ಗೋಪಾಲಕೃಷ್ಣ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಶಾಸಕ ಎಸ್.ಎನ್. ಚನ್ನಬಸಪ್ಪ ಹಾಜರಿದ್ದು, ಸ್ಪರ್ಧಿಗಳಾದ ಎಸ್.ಕೆ.ಮರಿಯಪ್ಪ, ದಿನೇಶ್, ವಿರೂಪಾಕ್ಷಪ್ಪ ಮುಂತಾದವರು ಮತಯಾಚನೆಯಲ್ಲಿ ತೊಡಗಿದ್ದರು.


ಸಂಸದ ಬಿ.ವೈ.ರಾಘವೇಂದ್ರ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಪರಸ್ಪರ ಕೈಕುಲಕಿ ಒಬ್ಬರಿಗೊಬ್ಬರು ಅಭಿನಂದಿಸಿದ ದೃಶ್ಯ ರಾಜಕಾರಣಿಗಳು ಒಟ್ಟಾರೆ ಒಂದೇ ಎಂಬ ಸಂದೇಶ ಸಾರಿತ್ತು.
೨೦೨೮-೨೯ ನೇ ಸಾಲಿನ ೦೫ ವರ್ಷಗಳ ಅವಧಿಯಲ್ಲಿನ ಚುನಾವಣೆಗೆ ಉದೇದುವಾರಿಕೆ ವಾಪಸ್ಸು ಪಡೆದ ನಂತರ ಅಂತಿವಾಗಿ ಚುನಾವಣಾ ಕಣದಲ್ಲಿ ಒಟ್ಟು ೨೭ ಅಭ್ಯರ್ಥಿಗಳು ಉಳಿದಿದ್ದಾರೆ.


ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ಶಿವಮೊಗ್ಗ ತಾಲ್ಲೂಕು ಕ್ಷೇತ್ರದಿಂದ ಕೆ.ಪಿ ದುಗ್ಗಪ್ಪಗೌಡ, ಶಿವನಂಜಪ್ಪ.ಜೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಭದ್ರಾವತಿ ತಾಲ್ಲೂಕು ಕ್ಷೇತ್ರದಿಂದ ಹೆಚ್.ಎಲ್. ಷಡಾಕ್ಷರಿ, ಸಿ.ಹನುಮಂತಪ್ಪ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ತೀರ್ಥಹಳ್ಳಿ ತಾ. ಕ್ಷೇತ್ರದಿಂದ ಬಸವಾನಿ ವಿಜಯದೇವ್, ಕೆ.ಎಸ್.ಶಿವಕುಮಾರ್, ಪ್ರಾ ಕೃ ಪ ಸ ಸಂಘ ನಿ ಸಾಗರ ತಾಲ್ಲೂಕು ಕ್ಷೇತ್ರದಿಂದ ಗೋಪಾಲಕೃಷ್ಣ ಬೇಳೂರು, ರತ್ನಾಕರ ಹೊನಗೋಡು, ಪ್ರಾ ಕೃ ಪ ಸ ಸಂಘ ನಿ ಶಿಕಾರಿಪುರ ತಾಲ್ಲೂಕು ಕ್ಷೇತ್ರದಿಂದ ಅಗಡಿ ಅಶೋಕ, ಎಸ್.ಪಿ ಚಂದ್ರಶೇಖರಗೌಡ, ಪ್ರಾ ಕೃ ಪ ಸ ಸಂಘ ನಿ ಸೊರಬ ತಾಲ್ಲೂಕು ಕ್ಷೇತ್ರದಿಂದ ಕೆ.ಪಿ. ರುದ್ರಗೌಡ, ಶಿವಮೂರ್ತಿಗೌಡ, ತಾಲ್ಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ ಹಾಘೂ ಇತರೆ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಗಳು ಶಿವಮೊಗ್ಗ ಉಪ ವಿಭಾಗದಿಂದ ಆರ್.ಎಂ. ಮಂಜುನಾಥಗೌಡ ಕಣದಲ್ಲಿದ್ದಾರೆ.


ಅಲ್ಲದೇ ವಿರೂಪಾಕ್ಷಪ್ಪ ಜಿ.ಈ, ತಾಲ್ಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ ಹಾಘೂ ಇತರೆ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಗಳು ಸಾಗರ ಉಪ ವಿಭಾಗದಿಂದ ಬಿ.ಡಿ ಭೂಕಾಂತ್, ಜಿ.ಎಸ್.ಸುಧೀರ್, ಪಟ್ಟಣ ಸಹಕಾರ ಬ್ಯಾಂಕುಗಳ ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳು ಶಿವಮೊಗ್ಗ ಉಪವಿಭಾಗದಿಂದ ಎಸ್.ಪಿ.ದಿನೇಶ, ಮರಿಯಪ್ಪ, ಪಟ್ಟಣ ಸಹಕಾರ ಬ್ಯಾಂಕುಗಳ

ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳು ಸಾಗರ ಉಪವಿಭಾಗದಿಂದ ಎಸ್.ಕೆ, ಬಸವರಾಜ್ ಡಿ.ಎಲ್, ರವೀಂದ್ರ ಹೆಚ್.ಎಸ್, ಬ್ಯಾಂಕಿನ ಕಾರ್ಯ ವ್ಯಾಪ್ತಿಯಲ್ಲಿ ಬರುವ ಇನ್ನಿತರ ಸಹಕಾರ ಸಂಘಗಳು ಶಿವಮೊಗ್ಗ ಉಪವಿಭಾಗದಿಂದ ಆನಂದ ಡಿ, ಕೆ.ಎಲ್.ಜಗದೀಶ್ವರ್, ಹೆಚ್.ಬಿ ದಿನೇಶ್, iಹಾಲಿಂಗಯ್ಯ ಶಾಸ್ತ್ರಿ ಎಸ್.ಎನ್, ಜೆ.ಪಿ ಯೋಗೇಶ್, ಟಿ. ಶಿವಶಂಕರಪ್ಪ, ಹರೀಶ್ ಎನ್.ಡಿ ಇವರುಗಳು ಕಣದಲ್ಲಿದ್ದಾರೆ.

By admin

ನಿಮ್ಮದೊಂದು ಉತ್ತರ

You missed

error: Content is protected !!