ಶಿವಮೊಗ್ಗ; ಜುಲೈ 03 : ಶಿಕಾರಿಪುರ ತೋಟಗಾರಿಕೆ ಇಲಾಖಾ ವತಿಯಿಂದ 2024-25ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ (ಅಂಗಾಂಶ ಬಾಳೆ, ಹೈಬ್ರಿಡ್ ತರಕಾರಿ,
ಕಾಳುಮೆಣಸು, ಬಿಡಿಹೂ, ಸುಗಂಧರಾಜ ಮತ್ತು ಗುಲಾಬಿ), ಮಾವು ಪುನಶ್ಚೇತನ, ಕೃಷಿ ಹೊಂಡ, ತರಕಾರಿ ಬೆಳೆಗೆ ಪ್ಲಾಸ್ಟಿಕ್ ಹೊದಿಗೆ ಮತ್ತು ಪ್ಯಾಕ್ ಹೌಸ್ ಘಟಕಗಳಡಿ ಸಹಾಯಧನ ನೀಡುತ್ತಿದ್ದು, ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ರೈತರು ನಿಗಧಿತ ನಮೂನೆ ಅರ್ಜಿಯನ್ನು ಶಿಕಾರಿಪುರ ತಾಲೂಕು ತೋಟಗಾರಿಕೆ ಇಲಾಖೆಯಲ್ಲಿ ಪಡೆದು
, ಭರ್ತಿ ಮಾಡಿದ ಅರ್ಜಿಯನ್ನು ಜುಲೈ 15 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಶಿಕಾರಿಪುರ ತಾಲೂಕು ತೋಟಗಾರಿಕೆ ಕಚೇರಿಯನ್ನು ಸಂಪರ್ಕಿಸುವುದು.