ಶಿವಮೊಗ್ಗ, ಜುಲೈ ೨೪,
      ಜಿಲ್ಲೆಯಲ್ಲಿ ಲೇವಾದೇವಿ ನಡೆಸುತ್ತಿರುವ ಲೇವಾದೇವಿಗಾರರು, ಗಿರವಿದಾರರು ಮತ್ತು ಹಣಕಾಸು ಸಂಸ್ಥೆಗಳು, ವ್ಯವಹಾರ ಸ್ಥಳದ ಕಚೇರಿಯಲ್ಲಿ ಪರವಾನಿಗೆಯನ್ನು ಕಡ್ಡಾಯವಾಗಿ ಪ್ರದರ್ಶಿಸತಕ್ಕದ್ದು.


       ಕರ್ನಾಟಕ ಲೇವಾದೇವಿ ಅಧಿನಿಯಮ ೧೯೬೧ ರ ಪ್ರಕರಣ ೨೮ ರಡಿ ಸರ್ಕಾರವು ನಿಗದಿಪಡಿಸಿರುವ ಬಡ್ಡಿದರ ಭದ್ರತಾ ಸಾಲಗಳಿಗೆ ವಾರ್ಷಿಕ ಶೇ.೧೪ ರಷ್ಟು, ಭದ್ರತಾ

ರಹಿತ ಸಾಲಗಳಿಗೆ ವಾರ್ಷಿಕ ಶೇ.೧೬ ರಷ್ಟಯ ಬಡ್ಡಿಯನ್ನು ಮಾತ್ರ ವಿಧಿಸತಕ್ಕದ್ದು.

ಸರ್ಕಾರವು ನಿಗದಿಪಡಿಸಿದ ಬಡ್ಡಿ ದರಕ್ಕಿಂತ ಹೆಚ್ಚಿನ ಬಡ್ಡಿ ದರ ಪಡೆದ ಬಗ್ಗೆ ಪರಿವೀಕ್ಷಣೆಯಲ್ಲಿ

ಕಂಡುಬAದಲ್ಲಿ ಅಥವಾ ಸಾರ್ವಜನಿಕರಿಂದ ದೂರುಗಳು ಬಂದಲ್ಲಿ ಸದರಿಯವರ ಮೇಲೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

You missed

error: Content is protected !!