ತಮಿಳುನಾಡಿನಿಂದ ಶಿವಮೊಗ್ಗ ಹೊರವಲಯದ ಅಬ್ಬಲಗೆರೆಯ ಹುಣಸೋಡು ಬಳಿ ಕಲ್ಲು ಗಣಿಗಾರಿಕೆ ಬಳಿಗೆ ಬರುತ್ತಿದ್ದ ಲಾರಿ ಸ್ಫೋಟಗೊಂಡ ಘಟನೆಯಲ್ಲಿ 8 ಸಾವನಪ್ಪಿದ್ದು, ಗಣಿಗಾರಿಕೆ ನಡೆಸುತ್ತಿದ್ದ ಸುಧಾಕರ್ ಹಾಗೂ ನರಸಿಂಹ ಗಂಧದ ಮನೆ ಎಂಬುವವರನ್ನು ಪೊಲೀಸರು ವಿಚಾರಣೆ ಗೆ ಕರೆದೊಯ್ದಿದ್ದಾರೆ.
ಈ ಸ್ಥಳಗಳಲ್ಲಿ ಗಣಿಗಾರಿಕೆ ನಡೆಸಲು ಮಾತ್ರ ಅವಕಾಶವಿದ್ದು, ಯಾವುದೇ ಸ್ಪೋಟಕವನ್ನು ಬಳಸುವಂತಿರಲಿಲ್ಲ
.

ಸ್ಥಳಕ್ಕೆ ಜಿಲ್ಲಾ ರಕ್ಷಾಣಾಧಿಕಾರಿ ಸೇರಿದಂತೆ ಹಲವು ಪೊಲೀಸರು ಬೀಡು ಬಿಟ್ಟಿದ್ದಾರೆ

ಸ್ಪೋಟ ಗೊಂಡ ನಂತರ ಅಕ್ಕ ಪಕ್ಕದ ಹಳ್ಳಿಗಳಾದ ಬಸವನಗಂಗೂರು, ಅಬ್ಬಲಗೆರೆ ಸೇರಿದಂತೆ ಹಲವೆಡೆ ಮನೆಗಳಿಗೆ ತೀವ್ರ ಹಾನಿಯಾಗಿದ್ದು, ಸ್ಥಳದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಗಣಿಗಾರಿಕೆಗೆ ಮೂವರು ರಾಜಕಾರಣಿಗಳ ಬೆಂಬಲ: ಕಲ್ಲುಗಂಗೂರು, ದೇವಕಾತಿಕೊಪ್ಪ, ಗೆಜ್ಜೇನಹಳ್ಳಿ ಹುಣಸೋಡು, ಅಬ್ಬಲಗೆರೆಗಳಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಗೆ ಕೆಲ ರಾಜಕಾರಣಿಗಳ ಹಾಗೂ ಪೊಲೀಸರ ಬೆಂಬಲವಿದೆ ಎಂದು ಅಲ್ಲಿನ ಕೆಲ ಗ್ರಾಮಸ್ಥರ ಆರೋಪವಾಗಿದೆ.

ಮೋದಿ ಸಂತಾಪ: ಶಿವಮೊಗ್ಗದಲ್ಲಿ ಪ್ರಾಣಹಾನಿ ನೋವು. ದುಃಖಿತ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸಿದ್ದಾರೆ. ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಟ್ವಿಟರ್ ನಲ್ಲಿ ತಿಳಿಸಿದ್ದಾರೆ..

ಸ್ಪೋಟ ದುರಂತ: ಸರ್ಕಾರ ತನಿಖೆ ನಡೆಸಬೇಕು : ಕುಮಾರ ಸ್ವಾಮಿ
ಕಲ್ಲು ಕ್ವಾರಿಯಲ್ಲಿ ನಡೆದ ಈ ಸ್ಫೋಟದುರಂತದ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಬೇಕು. ಬಡ ಕಾರ್ಮಿಕರ ಜೀವ ಹರಣಕ್ಕೆ, ಈ ದುರ್ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ..

ಮುಖ್ಯಮಂತ್ರಿ ಬಿ.ಎಸ್.ವೈ ಸಂತಾಪ: ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದ, ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!