ಶಿವಮೊಗ್ಗ,ಅ.೭: ಯಾರು ತಿಪ್ಪರಲಾಗ ಹೊಡೆದರೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವುದಿಲ್ಲ. ಅದು ಬಿಜೆಪಿಯವರ ಹಗಲುಗನಸು ಅಷ್ಟೇ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹೇಳಿದರು.


ಅವರು ಇಂದು ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ನೂತನವಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಿ ಜಿಲ್ಲಾ ಕಾರ್ಯಾಲಯದ ಉದ್ಘಾಟನೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು.


ಮೂಡ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎನಿಸುತ್ತಿದೆ. ಸರ್ಕಾರ ಅಸ್ಥಿರಗೊಳಿಸುವ ಹುನ್ನಾರ ರಾಜಭವನದಿಂದ ಆಗುತ್ತಿದೆ. ಆದರೆ, ಯಾರು ಏನೇ ಹೇಳಿದರು. ಸರ್ಕಾರ ಬೀಳಿಸಲು ಸಾಧ್ಯವಿಲ್ಲ ಬಿಜೆಪಿಯ ೬೭ ಸೀಟುಗಳು ಎಲ್ಲಿ ? ಕಾಂಗ್ರೆಸ್ಸಿನ ೧೩೬ ಸೀಟುಗಳು ಎಲ್ಲಿ ? ಎಂದರು.


ಬಿಜೆಪಿಯವರಿಗೆ ಹೊಟ್ಟೆಕಿಚ್ಚು ಆರಂಭವಾಗಿದೆ. ಇವರ ಜೊತೆಗೆ ಜೆಡಿಎಸ್‌ನವರು ಸೇರುತ್ತಿದ್ದಾರೆ. ಸಿ.ಎಂ.ರಾಜೀನಾಮೆಯ ಬಗ್ಗೆ ತೀರ್ಮಾನ ಮಾಡುವುದು ಸಿ.ಟಿ.ರವಿ, ನಾರಾಯಣಸ್ವಾಮಿ ಅಲ್ಲ, ಅದು ಪಕ್ಷದ ಹೈಕಮಾಂಡ್‌ನ ತೀರ್ಮಾನ ಎಂದು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ವರ್ಗಾವಣೆ ದಂಧೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಡಿಡಿಪಿಐ, ಬಿಇಓ, ವರ್ಗಾವಣೆಗೆ ಲಂಚ ಪಡೆಯಲಾಗುತ್ತಿದೆ ಎಂಬ ದೂರುಗಳು ಸತ್ಯವಲ್ಲ. ನಮ್ಮಲ್ಲಿ ಯಾರೇ ಆಗಲಿ ಏಜೆಂಟೆಆಗಲಿ ಈ ರೀತಿಯ ಹಣ ಪಡೆದಿದ್ದರೆ ನಿರ್ಧಾಕ್ಷಿಣ್ಯವಾಗಿ ಅವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು

.
ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ ಅವರ ತಂದೆ ಅಧಿಕಾರಿದಲ್ಲಿದ್ದಾಗ ಎಷ್ಟು ಲಂಚ ಹೊಡೆದಿದ್ದಾರೆ ಎಂದು ಜನರೇ ಹೇಳುತ್ತಾರೆ. ಇದೇ ವಿಜಯೇಂದ್ರನ ಸಹವಾಸದಿಂದ ಯಡಿಯೂರಪ್ಪ ಜೈಲಿಗೆ ಹೋದರು. ನಮಗ್ಯಾಕೆ ಈ ಪ್ರಶ್ನೆ ಕೇಳುತ್ತೀರ, ನಿಮ್ಮ ಪಕ್ಷದ ನಾಯಕ ಯತ್ನಾಳ್ ಅವರಿಗೆ ಮೊದಲು ಇವರು ಉತ್ತರ ಕೊಡಲಿ ಆಮೇಲೆ ನಮ್ಮನ್ನು ಕೇಳಲಿ. ಯತ್ನಾಳ್ ಹಿರಿಯರು ಎಂಬ ನೆಪ ಹೇಳುತ್ತಾರೆ. ಹಿರಿಯರ ಕೈಯಲ್ಲಿ ಬೈಯಸಿಕೊಳ್ಳಲು ಇವರಿಗೆ ನಾಚಿಕೆಯಾಗುವುದಿಲ್ಲವ ಎಂದರು.


ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷದವರು ಹಗುರವಾಗಿ ಮಾತನಾಡುತ್ತಿದ್ದಾರೆ. ಚುನಾವಣೆಗೂ ಮುನ್ನ ಎಲ್ಲಾ ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್ ಮಾತುಕೊಟ್ಟಿತ್ತು. ಆ ಮಾತಿನಂತೆ ನಡೆದುಕೊಳ್ಳುತ್ತಿದ್ದೇವೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿಯೇ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಕಚೇರಿಯನ್ನು ತೆರೆಯುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿಯೇ ಇದೆ ಎಂದರು.


ಶಿಕ್ಷಕರ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಸ್ಪಂಧಿಸುತ್ತಿದೆ. ಅವರ ಕೆಲವು ಬೇಡಿಕೆಗಳ ಈಡೇರಿಕೆಗೆ ಕಾನೂನಿನ ತಿದ್ದುಪಡಿಯ ಅಗತ್ಯವಿದೆ. ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಎಲ್ಲವೂ ಕೌನ್ಸಿಲ್ ಮೂಲಕವೇ ನಡೆಯುತ್ತದೆ. ಯಾರೇ ಆಗಲಿ ವರ್ಗಾವಣೆಗೆ ಹಣ ಪಡೆದಿದ್ದಾರೆ ಎಂದು ಗೊತ್ತಾದರೆ ಅವನು ಏಜೆಂಟೆ ಆಗಲಿರಲಿ ಎರಡು ನಿಮಿಷದಲ್ಲಿ ಕಿತ್ತು ಬೀಸಾಕುವೆ ಎಂದರು.
ಶಿವಮೊಗ್ಗದ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದವರು ಪ್ರಧಾನಿ ನರೇಂದ್ರ ಮೋದಿಯವರು ಆದರೆ ವಿಮಾನಗಳ ಹಾರಾಟ ನಮ್ಮ ಸರ್ಕಾರ ಬಂದ ಮೇಲೆ ಆಗಿದೆ. ಸಂಸದ ರಾಘವೇಂದ್ರ ಅವರು ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ನೈಟ್ ಲ್ಯಾಂಡಿಗೆ ಬಗ್ಗೆ ಮನವಿ ಕೊಟ್ಟಿದ್ದಾರೆ. ಅವರಿಗೆ ಯಾಕೆ ಮನವಿ ಕೊಟ್ಟಿದ್ದಾರೋ ಗೊತ್ತಿಲ್ಲ ಎಂದರು.

By admin

ನಿಮ್ಮದೊಂದು ಉತ್ತರ

error: Content is protected !!