ಶಿವಮೊಗ್ಗ : ತಾಲ್ಲೂಕಿನ ರಾಮೇನಕೊಪ್ಪದಲ್ಲಿ ಹಲವಾರು ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸವಾಗಿರುವ ಮನೆಗಳಿಗೆ ಹಕ್ಕುಪತ್ರ ನೀಡಿ ಹಾಗೂ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವವರಿಗೆ ಸೈಟು ನೀಡಬೇಕು  ಎಂದು ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಪದಾಧಿಕಾರಿಗಳು ಇಂದು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. 

ರಾಮೇನಕೊಪ್ಪದಲ್ಲಿ ಹಲವಾರು ವರ್ಷಗಳಿಂದ ಹಿಂದುಳಿದ ವರ್ಗಗಳ ಜನಾಂಗಗಳು ದಿನನಿತ್ಯ ಕೂಲಿ ಮಾಡಿ ವಾಸಿಸುತ್ತಿದ್ದು, ಇವರಿಗೆ ಮನೆ ಕಟ್ಟಲು ಜಾಗವಿಲ್ಲದೇ ಸರ್ಕಾರಿ ಹಾಗದಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಇವರು ಮೂಲ ಸೌಲಭ್ಯಗಳಿಂದ ವಂಚಿತರಾಗಿರುತ್ತಾರೆ. ಇದುವರೆಗೂ ಸರ್ಕಾರದಿಂದ ಅವರು ಕಟ್ಟಿಕೊಂಡಿರುವ ಮನೆಗಳಿಗೆ ಹಕ್ಕುಪತ್ರ ಸಹ ನೀಡಿರುವುದಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಹಲವಾರು ಜಾತಿ ಜನಾಂಗಗಳು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದರೂ ಅವರಿಗೆ ಗ್ರಾಮ ಪಂಚಾಯಿತಿಯಿಂದ ಸೈಟ್ ಗಳನ್ನು ಸಹ ಹಂಚಿಕೆ ಮಾಡಿರುವುದಿಲ್ಲ. ಆದ್ದರಿಂದ ಕಟ್ಟಿರುವ ಮನೆಗಳಿಗೆ ಹಕ್ಕುಪತ್ರ ನೀಡಿ ಹಾಗೂ ಸೂರಿಲ್ಲದವರಿಗೆ ಸೂರು ಕಟ್ಟಲು ಜಾಗ ನೀಡಬೇಕು ಎಂದು ಆಗ್ರಹಿಸಿದರು.

ಇಲ್ಲವಾದರೆ ಮುಂದಿನ ದಿನಗಳಲ್ಲಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ವತಿಯಿಂದ ತಹಶಿಲ್ದಾರರ ಕಛೇರಿಯ ಎದುರು ಬೃಹತ್ ಪ್ರತಿಭಟನೆ, ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಂಘಟನೆಯ ಅಧ್ಯಕ್ಷ ವಾಟಾಳ್ ಮಂಜುನಾಥ್, ಗ್ರಾಮಾಸ್ಥರಾದ ಲೋಕೇಶ್, ಮಂಜಮ್ಮ, ಚಂದ್ರಪ್ಪ, ಚಿಕ್ಕಮ್ಮ, ಮಂಜುಳ,ರವಿಕುಮಾರ್, ಸೀಮಾ, ಹರ್ಷ, ಶಾಂತಾಲಕ್ಷ್ಮೀ, ಪಕೀರಮ್ಮ ಮತ್ತಿತರರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!