ಶಿವಮೊಗ್ಗ ಸೆಪ್ಟೆಂಬರ್ 28 ಕರ್ನಾಟಕ ವಾರ್ತೆ  : ರಾಜ್ಯ ಸರ್ಕಾರದ ಐತಿಹಾಸಿಕ ಮತ್ತು ಮಹತ್ವಾಕಾಂಕ್ಷೆಯ ಶಕ್ತಿ ಗ್ರಹ ಜ್ಯೋತಿ ಅನ್ನಭಾಗ್ಯ ಗ್ರಹಲಕ್ಷ್ಮಿ ಮತ್ತು ಯುವ ನಿಧಿ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯಭರದಿಂದ ಸಾಗಿದ್ದು

ಈ ಸಂಬಂಧ ಅಕ್ಟೊಬರ್ ಒಂದರಂದು ಸಂಜೆ ನಾಲ್ಕು ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ  ರಾಜ್ಯ  ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಸಿ ಎಸ್ ಚಂದ್ರ ಭೂಪಾಲ ಅವರು ಹೇಳಿದರು.

 ಅವರು ಇಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಈ ಸಭೆಗೆ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯಾಧ್ಯಕ್ಷ ಹೆಚ್ಎಂ ರೇವಣ್ಣ ಹಾಗೂ ಉಪಾಧ್ಯಕ್ಷ ಸೂರಜ್ ಎಂ ಎಂ ಹೆಗಡೆ ಅವರು ಈ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು. 

 ಈ ಗ್ಯಾರಂಟಿ ಯೋಜನೆಗಳ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಶೇಕಡ 85ರಷ್ಟು ಪ್ರಗತಿ ಸಾಧಿಸಿದ್ದು ಈ ಯೋಜನೆಗಳ ಲಾಭ ಪಡೆದಿರುವ ಫಲಾನುಭವಿಗಳಲ್ಲಿ ನಂಬಿಕೆ ವಿಶ್ವಾಸ ದೃಢತೆಯ ಭಾವನೆಯನ್ನು ಮೂಡಿಸುವ ಪ್ರಯತ್ನ ಮಾಡಬೇಕಾಗಿದೆ ಈ ನಿಟ್ಟಿನಲ್ಲಿ

ಜಿಲ್ಲಾ ಪ್ರಾಧಿಕಾರವು ಹಲವು ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಿದೆ ಎಂದ ಅವರು, ಈ 5 ಗ್ಯಾರೆಂಟಿ ಯೋಜನೆಗಳ ವ್ಯಾಪ್ತಿಯಲ್ಲಿ ಸೇರ್ಪಡೆಯಾಗದೆ ಉಳಿದ ಎಲ್ಲಾ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಅವರೆಲ್ಲರಿಗೂ ಯೋಜನೆಗಳ ಲಾಭ ದೊರಕುವಂತೆ ಮಾಡುವ ಕೆಲಸವನ್ನು ಪ್ರಾಧಿಕಾರ ಹಾಗೂ ಪ್ರಾಧಿಕಾರದ ಸದಸ್ಯರು ನಿರ್ವಹಿಸಲಿದ್ದಾರೆ ಎಂದರು.

 ಈ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಗೊಳಿಸುವ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ತಾಲೂಕಿನ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳನ್ನು ಈ ಸಭೆಗೆ ಆಹ್ವಾನಿಸಲಾಗಿದೆ ಅಲ್ಲದೆ ಇದೇ

ಮೊದಲ ಬಾರಿಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆಯಲು 35 ಪ್ರಶ್ನೆಗಳಿಗೆ ಉತ್ತರಿಸುವಂತೆ ಈಗಾಗಲೇ ಮಾಹಿತಿ ನೀಡಿದ್ದು ಸಭೆಯಲ್ಲಿ ಈ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಾಗುವುದು ಎಂದ ಅವರು ಈ ರೀತಿಯ ಮಾಹಿತಿ ಪಡೆದುಕೊಳ್ಳುತ್ತಿರುವುದು ರಾಜ್ಯದಲ್ಲಿ ಇದೆ ಮೊದಲು ಎಂದವರು ನುಡಿದರು. 

 ಗೃಹಲಕ್ಷ್ಮಿ ಯೋಜನೆ ಅಡಿ ಆಯುಧ ಕೆಲವು ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ದೊರೆಯದಿರುವ ಬಗ್ಗೆ ಗಮನಿಸಲಾಗಿದೆ ಈಗಾಗಲೇ ತೆರಿಗೆ ಪಾವತಿದಾರರು ಜಿ ಎಸ್ ಟಿ ಪಾವತಿದಾರರಿಗೆ ಮಾಶಾಸನ ತಲುಪಿರುವುದಿಲ್ಲ. ಅಂತಹ ವ್ಯಕ್ತಿಗಳು ದೃಢೀಕರಣ ಪತ್ರವನ್ನು ಸಲ್ಲಿಸಿದಲ್ಲಿ ಮಾಶಾಸನ ಪುನರ್ ಆರಂಭಗೊಳ್ಳಲಿದೆ ಎಂದವರು ನುಡಿದರು.

  ಸಭೆಯಲ್ಲಿ ಗ್ಯಾರಂಟಿ ಯೋಜನೆ ಪ್ರಾಧಿಕಾರದ  ಉಪಾಧ್ಯಕ್ಷ ಬಿ ಆರ್ ಶಿವಣ್ಣ ಸದಸ್ಯರಾದ ಶ್ರೀಮತಿ ಪ್ರಭಾಕೃಷ್ಣಮೂರ್ತಿ ರಾಹುಲ್ ಶಿವಾನಂದ್ ಎಚ್ ಎಮ್ ಮಧು ಶ್ರೀಮತಿ ಅರ್ಚನಾ ಮುಂತಾದವರು ಉಪಸ್ಥಿತರಿದ್ದರು.

ReplyReply allForwardAdd reaction

By admin

ನಿಮ್ಮದೊಂದು ಉತ್ತರ

error: Content is protected !!