ವಿದ್ಯುತ್ ವ್ಯತ್ಯಯ

ಶಿವಮೊಗ್ಗ. ಅ ೧೯ ; ಶಿವಮೊಗ್ಗ ನಗರದ ಗಾಂಧಿಬಜಾರ್, ಹರಳೆಣ್ಣೆಕೇರಿ, ಎಲೆರೇವಣ್ಣ ಕೇರಿ, ಓ.ಟಿ.ರಸ್ತೆ, ಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅ.೨೧ ರಂದು ಬೆಳಗ್ಗೆ ೯.೦೦ ರಿಂದ ಸಂಜೆ ೬.೦೦ ರವರೆಗೆ ಗಾಂಧಿಬಜಾರ್, ಹರಳೆಣ್ಣೆಕೇರಿ, ಎಲೆರೇವಣ್ಣ ಕೇರಿ, ಲಷ್ಕರ್ ಮೊಹಲ್ಲಾ, ನಾಗಪ್ಪಕೇರಿ, ಅಶೋಕರಸ್ತೆ, ಕುಚ್ಚುಲಕ್ಕಿ ಕೇರಿ, ತುಳುಜಾ ಭವಾನಿ ರಸ್ತೆ, ಸಾವರ್ಕರ್ ನಗರ, ಫಿಶ್ ಮಾರ್ಕೆಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ವೀರಮಾತೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ
ಶಿವಮೊಗ್ಗ. ಅಕ್ಟೋಬರ್ ೧೯ ; ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಅ.೨೩ ರಂದು ಬೆಳಗ್ಗೆ ೧೧.೦೦ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ವೀರಮಾತಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವರು

ನೆರವೇರಿಸುವರು. ಶಾಸಕರಾದ ಎಸ್.ಎನ್ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಜಿಲ್ಲೆಯ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿ?ತ್ ಶಾಸಕರು, ಜನಪ್ರತಿನಿಧಿಗಳು, ಪಾಲಿಕೆ ಮಹಾಪೌರರು, ವಿವಿಧ ನಿಗಮ/ಮಂಡಳಿ

, ಪ್ರಾಧಿಕಾರಗಳ ಅಧ್ಯಕ್ಷರು, ಕ.ರಾ.ವೀ.ಲಿಂ.ಪಂ. ಸಂಘದ ಮುಖಂಡರು/ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿ?ಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು ಹಾಗೂ ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು/ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಶಿವಮೊಗ್ಗ ಸಿರಿಗನ್ನಡ ಪುಸ್ತಕ ಮನೆ ಪ್ರಕಾಶಕರಾದ ಎಸ್.ಸುಂದರ ಇವರಿಂದ ವಿಶೇ? ಉಪನ್ಯಾಸ ಆಯೋಜಿಸಲಾಗಿದೆ.

By admin

ನಿಮ್ಮದೊಂದು ಉತ್ತರ

error: Content is protected !!