ಶಿವಮೊಗ್ಗ : ಪೂಜ್ಯ ಪೇಜಾವರ ಶ್ರೀ ಗಳ ಬಗ್ಗೆ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಟೀಕೆ ಮಾಡಿರುವುದು ಸರಿಯಲ್ಲ, ಪೂಜ್ಯರ ಬಳಿ ಕ್ಷಮೆ ಕೇಳಲಿ ಎಂದು ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಆಗ್ರಹಿಸಿದ್ದಾರೆ.

“ಸರ್ಕಾರ ಹಣ ಖರ್ಚು ಮಾಡಿ ಜಾತಿ ಜನಗಣತಿ ಮಾಡಿ ಮುಚ್ಚಿಟ್ಟಿದೆ. ಒಂದು ಕಡೆ ಜಾತಿ ಆಧಾರದಲ್ಲಿ ರಾಜಕೀಯ ಬೇಡ ಎನ್ನುತ್ತೀರಿ. ಇನ್ನೊಂದು ಕಡೆ ಜಾತಿ ಗಣತಿ ಎನ್ನುತ್ತೀರಿ, ಈ ಜಾತಿ ಗಣತಿ ಯಾಕೆ ಎನ್ನುವುದು ತಿಳಿಯುತ್ತಿಲ್ಲ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನೀಡಿದ ಹೇಳಿಕೆ ಸಮಂಜಸವಾಗಿದೆ. ಆದರೆ, ಪೇಜಾವರ ಸ್ವಾಮೀಜಿ ಅವರು ಕಾವಿ ಬಟ್ಟೆ ತ್ಯಜಿಸಿ ಬಂದರೆ ಅವರಿಗೆ ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಬಿ.ಕೆ.ಹರಿಪ್ರಸಾದ್ ಅವರು ಕೊಟ್ಟ ಹೇಳಿಕೆಯು ಖಂಡನೀಯ.

ಪೇಜಾವರ ಶ್ರೀ ಗಳು ಹೇಳಿರುವ ವಿಷಯ, ಮಾತು ಸರಿಯಾಗಿಯೇ ಇದೆ.ಎ.ಸಿ ರೂಮಿನಲ್ಲಿ ಕುಳಿತು ಜಾತಿಗಣತಿಯ ವರದಿಯನ್ನು ಕಾಂಗ್ರೆಸ್ ಸರ್ಕಾರ ಸಿದ್ಧಪಡಿಸಿದೆ.ನಾವು ತಪ್ಪು ಮಾಡಿದಾಗ ತಿದ್ದಿ ಹೇಳುವ ಗುರುಗಳು, ಸಮಾಜವನ್ನು ಒಳ್ಳೆಯ ಮಾರ್ಗದಲ್ಲಿ ನಡೆಸಿಕೊಂಡು ಹೋಗುವ ಜವಾಬ್ದಾರಿಯನ್ನು ಪೂಜ್ಯ ಪೇಜಾವರ ಶ್ರೀಗಳು ಮಾಡುತ್ತಿದ್ದಾರೆ, ಅಂತಹ ಪೂಜ್ಯರ ಬಗ್ಗೆ ಅವಹೇಳನವಾಗಿ ಮಾತನಾಡುವುದನ್ನು ಹಿಂದೂ ಸಮಾಜ ಎಂದಿಗೂ ಸಹಿಸುವುದಿಲ್ಲ ಎಂದು ಶಾಸಕರಾದ ಡಾ.ಧನಂಜಯ ಸರ್ಜಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!