ಅವಧಿ ವಿಸ್ತರಣೆ
ಶಿವಮೊಗ್ಗ. ಅಕ್ಟೋಬರ್ 29 ) ; ಶಿವಮೊಗ್ಗ -ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಶಿವಮೊಗ್ಗದ ಊರಗಡೂರು ವಸತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಕುರಿತು ಆಗಸ್ಟ್-2024ರಲ್ಲಿ ಪ್ರಕಟಣೆ ನೀಡಲಾಗಿದ್ದು, ನಿವೇಶನ ಹಂಚಿಕೆಯ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ದಿ:25/11/2024ರವರೆಗೆ ವಿಸ್ತರಿಸಲಾಗಿದೆ ಎಂದು ಶಿ-ಭ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
———————-
ಬಾಲಕ/ಬಾಲಕಿಯರ ರಾಜ್ಯ ಮಟ್ಟದ ಅಥ್ಲೇಟಿಕ್ ಕ್ರೀಡಾಕೂಟ
ಶಿವಮೊಗ್ಗ. ಅಕ್ಟೋಬರ್ 29 ) ; ಶಿವಮೊಗ್ಗ ಶಾಲಾ ಶಿಕ್ಷಣ ಇಲಾಖೆಯು 2024-25ನೇ ಸಾಲಿನ 14 ವರ್ಷ ವಯೋಮಿತಿಯೊಳಗಿನ ಬಾಲಕ/ಬಾಲಕಿಯರ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ನ.15 ಮತ್ತು 16 ರಂದು ಎರಡು ದಿನಗಳು ನಗರದ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಿದೆ.
ಶಿವಮೊಗ್ಗ ಜಿಲ್ಲೆಗೆ ರಾಜ್ಯದ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿ/ವಿದ್ಯಾರ್ಥಿನಿಯರು ನ.14 ಮಧ್ಯಾಹ್ನ 2.30ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ವರದಿ ಮಾಡಿಕೊಳ್ಳುವಂತೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಪ್ರಕಾಶ್ ಎಂ. -9448964356 ಇವರನ್ನು ಸಂಪರ್ಕಿಸುವುದು.
————