ಶಿವಮೊಗ್ಗ : ರೋಟರಿ ಪೂರ್ವ ಆಂಗ್ಲ ಮಾಧ್ಯಮ ಶಾಲೆ ರಾಜೇಂದ್ರನಗರ ಶಿವಮೊಗ್ಗ ಮತ್ತು ರವೀಂದ್ರನಗರ ಕ್ಲಸ್ಟರ್‍ನ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ, ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸಮಾರಂಭದಲ್ಲಿ ರೋಟರಿ ಪೂರ್ವ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ರೋಟರಿ ಪೂರ್ವ ಶಾಲೆಯ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ಸುಮಾರು 40 ವಿವಿಧ ಕಲಾ ಪ್ರಕಾರಗಳಲ್ಲಿ ತಮ್ಮಲ್ಲಿದ್ದ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ. ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಭಾಗವಹಿಸಿ 24 ಕಲಾ ಪ್ರಕಾರಗಳಲ್ಲಿ ಪ್ರಶಸ್ತಿಗಳನ್ನು ಪಡೆದು,

ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ರೋಟರಿ ಪೂರ್ವ ಆಂಗ್ಲ ಮಾಧ್ಯಮ ಶಾಲೆಯಿಂದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವಕ್ಕೆ 11 ಕಲಾ ಪ್ರಕಾರಗಳಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.

ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿಸುವವಲ್ಲಿ ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕ ವರ್ಗದವರ ಕೊಡುಗೆಯು ಕೂಡ  ಬಹಳ ಮುಖ್ಯವಾಗಿದ್ದು, ಪ್ರಶಸ್ತಿಗೆ ಭಾಜನರಾಗಿರುವ ಎಲ್ಲ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ ವತಿಯಿಂದ ಪ್ರಶಂಶಿಸಿ, ಪ್ರಸಸ್ತಿ ಪತ್ರಗಳನ್ನು ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ವಿತರಿಸಲಾಯಿತು.

ಈ ಸಮಾರಂಭದಲ್ಲಿ ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷರಾದ ರೊ. ಅರುಣ್ ದೀಕ್ಷಿತ್, ಕಾರ್ಯದರ್ಶಿ ರೊ. ಶಶಿಕಾಂತ್ ನಾಡಿಗ್ ಮತ್ತು ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನಲ್ ಮತ್ತು ಛಾರಿಟಬಲ್ ಟ್ರಸ್ಟ್‍ನ ಮ್ಯಾನೇಜಿಂಗ್ ಟ್ರಸ್ಟಿ, ರೊ. ಚಂದ್ರಶೇಖರಯ್ಯ.ಎಂ,

ಉಪಾಧ್ಯಕ್ಷರು ರೊ. ಡಾ. ಪರಮೇಶ್ವರ್ ಡಿ. ಶಿಗ್ಗಾಂವ್, ಕಾರ್ಯದರ್ಶಿ ರೊ. ಎಸ್.ಸಿ.ರಾಮಚಂದ್ರ, ಖಜಾಂಚಿ ರೊ. ವಿಜಯ್ ಕುಮಾರ್.ಜಿ, ಜಂಟಿ ಕಾರ್ಯದರ್ಶಿ ರೊ. ನಾಗವೇಣಿ.ಎಸ್.ಆರ್, ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕ ವರ್ಗದವರು ಹಾಗೂ ಬಿಂದು ವಿಜಯ್ ಕುಮಾರ್ ಉಪಸ್ಥಿತರಿದ್ದರು. ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಕೋರಿದರು.

By admin

ನಿಮ್ಮದೊಂದು ಉತ್ತರ

You missed

error: Content is protected !!