ನ.21 ಈ ಕ್ರೀಡಾ ಕೂಟವನ್ನು ಒಂದು ದಿನದ ಮಟ್ಟಿಗೆ ದಿನಾಂಕ : 26/11/2024 ರಂದು ಶಿವಮೊಗ್ಗ ಜಿಲ್ಲೆಯ ಸರ್ಕಾರಿ,ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ  ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕರಿಗೆ  ಅಂದು  03 ಗಂಟೆಗೆ ಪಂದ್ಯಾವಳಿ ಪ್ರಾರಂಭವಾಗುವವು.ಪ್ರಥಮ ಬಾರಿಗೆ, ಜಿಲ್ಲೆಯ ದೈಹಿಕ ಶಿಕ್ಷಣ ಮಿತ್ರರಿಗೆ  ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಏರ್ಪಡಿಸಿರುವುದು ಇನ್ನೊಂದು ವಿಶೇಷವಾಗಿದೆ.

ಕ್ರೀಡಾ ಕ್ಷೇತ್ರದಲ್ಲಿ, ಅಪಾರ ಶಿಷ್ಯ ವರ್ಗವನ್ನು  ಸಜ್ಜುಗೊಳಿಸಿ, ತರಬೇತಿಯನ್ನು ಕೊಟ್ಟು ರಾಜ್ಯ, ರಾಷ್ಟ್ರ, ಅಂತ ರಾಷ್ಟ್ರಮಟ್ಟದಲ್ಲಿ ಅಸಂಖ್ಯಾತ  ಕ್ರೀಡಾಪಟುಗಳು ಸಾಧನೆ ಮಾಡಿದ್ದಾರೆ. ರಾಜ್ಯ, ರಾಷ್ಟ್ರ, ವಿದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಷ್ಯ ವರ್ಗವನ್ನು ನಾವು ಕಾಣಬಹುದು. ದಿ.ಫಿಲೋಮಿನ್ ರಾಜ್ ರವರ ಅಭಿಮಾನಿ ಬಳಗ ಶಿವಮೊಗ್ಗ.ಹಾಗೂ ತಾಲ್ಲೂಕಿನ ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಶಿವಮೊಗ್ಗ. ಇವರ ಸಹಯೋಗದಲ್ಲಿ ಮೊದಲನೇ ವರ್ಷದ ಪುಣ್ಯ ಸ್ಮರಣೆಯ  ಅಂಗವಾಗಿ  ಶಿವಮೊಗ್ಗ ಜಿಲ್ಲಾ ಮಟ್ಟದ “ದೈಹಿಕ ಶಿಕ್ಷಣ ಶಿಕ್ಷಕರ ವಾಲಿಬಾಲ್ ಪಂದ್ಯಾವಳಿ  2024 — 25”   ಪುರುಷರ  ಹೊನಲು ಬೆಳಕಿನ ವಾಲಿಬಾಲ್ ಕ್ರೀಡಾಕೂಟವನ್ನು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ  ಆಯೋಜಿಸಲಾಗಿದ್ದು,


ವಾಲಿಬಾಲ್ ನಲ್ಲಿ ವಿಜೇತ ಕ್ರೀಡಾಪಟುಗಳಿಗೆ ,  ಪಾರಿತೋಷಕ ದೊಂದಿಗೆ, ವೈಯಕ್ತಿಕ ಬಹುಮಾನಗಳನ್ನು ನೀಡಲಾಗುತ್ತದೆ.
      ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ 14 ಮತ್ತು 17 ವರ್ಷ ವಯೋಮಿತಿಯೊಳನ  ಕ್ರೀಡಾ ಪಟುಗಳಿಗೆ ಅಥ್ಲೆಟಿಕ್ಸ್ ಸ್ಪರ್ಧೆಯನ್ನು ವಿಶೇಷ ಚೇತನರಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಸಹ 26.11. 2024 ರಂದು ಬೆಳಿಗ್ಗೆ 9 ಗಂಟೆಗೆ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿದೆ.
     ಪಂದ್ಯಾವಳಿಯು ದಿನಾಂಕ :26/ 11/ 2024 ರಂದು ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ  ನಡೆಯಲಿದ್ದು, ಆಟಗಾರರ ಅನುಕೂಲಕ್ಕಾಗಿ ಎರಡು ಅಂಕಣಗಳನ್ನು ಸಿದ್ದಪಡಿಸಲಾಗಿದೆ.  ನುರಿತ ವಾಲಿಬಾಲ್ ತೀರ್ಪುಗಾರರು ಆಗಮಿಸಲಿದ್ದಾರೆ. ಜಿಲ್ಲೆಯ ವಿವಿಧ ತಾಲೂಕುಗಳಿಂದ ಬರುವ ಎಲ್ಲಾ ಕ್ರೀಡಾ ಪಟುಗಳಿಗೂ ಸಂಜೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ.

ನಿಬಂಧನೆಗಳು :1) ತಂಡಗಳು ಕಡ್ಡಾಯವಾಗಿ ಕ್ರೀಡಾ ಸಮವಸ್ತ್ರ ಧರಿಸಿ ಈ ಪಂದ್ಯಾವಳಿಯಲ್ಲಿ ಭಾಗವಹಿಸಬೇಕು.
2) ಒಂದು ತಂಡದಲ್ಲಿ 7 ಜನ ಕ್ರೀಡಾ ಪಟುಗಳು ದೈಹಿಕ  ಶಿಕ್ಷಣ ಶಿಕ್ಷಕರಿಗೆ   ಭಾಗವಹಿಸಲು ಅವಕಾಶ ವಿರತ್ತದೆ.


3) ಕಡ್ಡಾಯವಾಗಿ ಶಾಲಾ ಮತ್ತು ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕರಾಗಿರಬೇಕು. ಅಂತವರಿಗೆ ಮಾತ್ರ ಕ್ರೀಡೆಯಲ್ಲಿ ಭಾಗವಹಿಸಲು ಅವಕಾಶ, ಗುರುತಿನ ಚೀಟಿ ತರಬೇಕು.


4) 6.11.2024ರ ಒಳಗಾಗಿ ಹೆಸರು ನೊಂದಾಯಿಸಿಕೊಳ್ಳಲು ಅವಕಾಶವಿದೆ ಎಂದು  ಕ್ರೀಡಾ ಕೂಟದ ಸಂಚಾಲಕರಾದ ಮೈಕಲ್ ಕಿರಣ್  ಪತ್ರಿಕಾ ಪ್ರಕಟಣೆಯಲ್ಲಿ
  ಕೋರಿದ್ದಾರೆ .
ಹೆಚ್ಚಿನ ಮಾಹಿತಿ ಗಾಗಿ,  ಸಂಪರ್ಕಿಸಿ. 9380866009

By admin

ನಿಮ್ಮದೊಂದು ಉತ್ತರ

You missed

error: Content is protected !!