ಶಿವಮೊಗ್ಗ: ಕಲೆ ಮತ್ತು ಸಂಸ್ಕೃತಿಗೆ ಹೆಸರಾದ ದೇಶವಾದ ನಮ್ಮ ಭಾರತ ವಿವಿಧೆತೆಯಲ್ಲಿ ಏಕತೆಯನ್ನು ಸಾರುವ ದೇಶವಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.
ಅವರು ಇಂದು ಮಲೆನಾಡು ಕಲಾ ತಂಡ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಿವೃತ್ತ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಗೀತನಮನ, ಕಿರು ರಂಗ ಪ್ರದರ್ಶನ ಮತ್ತು ಸಾಧಕರಿಗೆ ಸನ್ಮಾನ, ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಲೆ ಉಳಿಯಬೇಕಾದರೆ ಸಹಕಾರದ ಮಾನಸಿಕತೆ ಬೇಕು. ಎಲ್ಲರೂ ಸೇರಿ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು. ಆಗ ಮಾತ್ರ ಎಲ್ಲಾ ಪ್ರಕಾರದ ವಿವಿಧತೆ ಉಳಿಯಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಕಲಾ ಸಾಧಕರಾದ ಗುಡ್ಡಪ್ಪ ಜೋಗಿ, ಶಕುಂತಲಾ ಅವರನ್ನು ಸನ್ಮಾನಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ, ಗಣೇಶ್ ಕೆಂಚನಾಲ, ರಾಜಕುಮಾರ್, ಹಾಲೇಶ್, ಮತ್ತಿತರರು ಇದ್ದರು.